ದೆಹಲಿ ವಿವಿ ವಿದ್ಯಾರ್ಥಿನಿ ಗುರ್ ಮೆಹರ್ ಕೌರ್ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ ವಿಡಿಯೋ ಹುಟ್ಟುಹಾಕಿದ ರಾಷ್ಟ್ರೀಯತೆ, ಅಭಿವ್ಯಕ್ತಿ ಸ್ವಾತಂತ್ರದ ಪರ-ವಿರೋಧ ಚರ್ಚೆಗೆ ವಿತ್ತ ಸಚಿವ ಅರುಣ್ ಜೇಟ್ಲಿ ಸೇರಿಕೊಂಡಿದ್ದಾರೆ. ರಾಷ್ಟ್ರೀಯತೆ ಒಳ್ಳೆ ಪದ ಆದರೆ ನಮ್ಮ ದೇಶದಲ್ಲಿ ಮಾತ್ರ ಇದು ಕೆಟ್ಟ ಪದ ಎಂದು ಮಾರ್ಮಿಕವವಾಗಿ ಹೇಳಿದ್ದಾರೆ.

ನವದೆಹಲಿ (ಮಾ.02): ದೆಹಲಿ ವಿವಿ ವಿದ್ಯಾರ್ಥಿನಿ ಗುರ್ ಮೆಹರ್ ಕೌರ್ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ ವಿಡಿಯೋ ಹುಟ್ಟುಹಾಕಿದ ರಾಷ್ಟ್ರೀಯತೆ, ಅಭಿವ್ಯಕ್ತಿ ಸ್ವಾತಂತ್ರದ ಪರ-ವಿರೋಧ ಚರ್ಚೆಗೆ ವಿತ್ತ ಸಚಿವ ಅರುಣ್ ಜೇಟ್ಲಿ ಸೇರಿಕೊಂಡಿದ್ದಾರೆ. ರಾಷ್ಟ್ರೀಯತೆ ಒಳ್ಳೆ ಪದ ಆದರೆ ನಮ್ಮ ದೇಶದಲ್ಲಿ ಮಾತ್ರ ಇದು ಕೆಟ್ಟ ಪದ ಎಂದು ಮಾರ್ಮಿಕವವಾಗಿ ಹೇಳಿದ್ದಾರೆ.

ಅದೇ ರೀತಿಯಲ್ಲಿ ರಕ್ಷಣಾ ಸಚಿವ ಮನೋಹರ್ ಕೂಡಾ ಪ್ರತಿಕ್ರಿಯಿಸಿದ್ದು, ಕಾನೂನಿನ ಪರಿಮಿತಿಯೊಳಗೆ ನಾನು ಅಭಿವ್ಯಕ್ತಿ ಸ್ವಾತಂತ್ರವನ್ನು ಬೆಂಬಲಿಸುತ್ತೇನೆ ಎಂದಿದ್ದಾರೆ. ಅದೇ ರೀತಿ ಹರ್ಯಾಣ ಮಂತ್ರಿ ಅನಿಲ್ ವಿಜ್, ಪಾಕ್ ಪರ ಮಾತನಾಡುವ ಗುರ್ ಮೆಹರ್ ಬೆಂಬಲಿಗರಿಗೆ ಭಾರತದಲ್ಲಿ ವಾಸಿಸುವ ಹಕ್ಕಿಲ್ಲ. ಅವರನ್ನು ದೇಶದಿಂದ ಹೊರ ಹಾಕಬೇಕು ಎಂದು ಗುಡುಗಿದ್ದಾರೆ.