ಭಾರತದ 14ನೇ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಸಂಸತ್​ ಭವನದ ಸೆಂಟ್ರಲ್​​​​​​ಹಾಲ್​ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ,  ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಜೆ.ಎಸ್. ಖೆಹರ್, ಕೋವಿಂದ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ನವದೆಹಲಿ: ಭಾರತದ 14ನೇ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಸಂಸತ್​ ಭವನದ ಸೆಂಟ್ರಲ್​​​​​​ಹಾಲ್​ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಜೆ.ಎಸ್. ಖೆಹರ್, ಕೋವಿಂದ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ದೇವರ ಹೆಸರಿನಲ್ಲಿ ಕೋವಿಂದ್ ಪ್ರಮಾಣ ಸ್ವಿಕರಿಸಿದರು.

ಈ ಸಮಾರಂಭದಲ್ಲಿ ಉಪರಾಷ್ಟ್ರಪತಿ ಹಾಮೀದ್ ಅನ್ಸಾರಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ವಿವಿಧ ದೇಶದ ರಾಯಭಾರಿಗಳು ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದರು.

ರಾಷ್ಟ್ರಪತಿಯಾಗಿ ಪ್ರಮಾಣ ಸ್ವೀಕರಿಸುವ ಮುನ್ನ ಗಾಂಧೀಜಿ ಸಮಾಧಿಗೆ ತೆರಳಿ ರಾಮನಾಥ ಕೋವಿಂದ್‌ ಪುಷ್ಪನಮನ ಸಲ್ಲಿಸಿದರು.

Scroll to load tweet…