ಮಂಡ್ಯ ಲೋಕಸಭೆಯಿಂದ ರಮ್ಯಾ ಸ್ಪರ್ಧೆ ಕನ್ಫರ್ಮ್?

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 27, Aug 2018, 8:43 PM IST
Ramya will be Mandya Lok Sabha Congress candidate says Mother Ranjitha
Highlights

ಮಾಜಿ ಸಂಸದೆ ರಮ್ಯಾ ತಾಯಿ ರಂಜಿತಾ ಹೇಳಿಕೆಯೊಂದನ್ನು ಮಂಡ್ಯದಲ್ಲಿ ನೀಡಿದ್ದಾರೆ.  ಲೋಕಸಭಾ ಚುನಾವಣೆಯಲ್ಲಿ ರಮ್ಯಾ ಅವರೇ ಮಂಡ್ಯದ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಭ್ಯರ್ಥಿ ಎಂದು ಹೇಳಿದ್ದು ರಾಜಕಾರಣದ ವಲಯದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ.

ಮಂಡ್ಯ[ಆ.27]   ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಪಾಲ್ಗೊಂಡಿದ್ದ ವೇಳೆ ಮಾತನಾಡಿದ ಮಾಜಿ ಸಂಸದೆ ರಮ್ಯಾ ತಾಯಿ ರಂಜಿತಾ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ರಮ್ಯಾ ಸ್ಪರ್ಧಿಸುತ್ತಾರೆ ಎಂದಿದ್ದಾರೆ.

ರಮ್ಯಾ ಅವರು ಸ್ಥಳೀಯ ನಾಯಕರಿಗೆ ಚುನಾವಣೆ ನೇತೃತ್ವ ವಹಿಸಿಕೊಳ್ಳಲು ಹೇಳಿದ್ದಾರೆ. ರಮ್ಯಾ ಕಾಂಗ್ರೆಸ್ ಪಕ್ಷದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಅವರು ಬರಲು ಸಾಧ್ಯವಾಗದ್ದಕ್ಕೆ ನನ್ನನ್ನು ಚುನಾವಣಾ ಪ್ರಚಾರಕ್ಕೆ ಕಳುಹಿಸಿಕೊಟ್ಟಿದ್ದಾರೆ. ಹೀಗಾಗಿ ಪ್ರತಿಯೊಬ್ಬ ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ ಮಾಡುತ್ತಿದ್ದೇನೆ ಎಂದಿದ್ದಾರೆ.

ರಮ್ಯಾ ಅವರು ಇಂಟರ್ನೆಟ್, ಈ ಮೇಲ್, ಫೋನ್ ಮುಖಾಂತರ ಎಲ್ಲರೊಂದಿಗೆ ಸಂಪರ್ಕದಲ್ಲಿದ್ದಾರೆ. ಮಂಡ್ಯದ ಎಲ್ಲ ವಿಷಯ ಅವರು ತಿಳಿದುಕೊಳ್ಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೇರೆಯವರ ಪಾಲಾಗದು. ಕಾಂಗ್ರೆಸ್ ಕಾರ್ಯಕರ್ತರೆಲ್ಲ ನಮಗಾಗಿ ಕಾಯುತ್ತಿದ್ದಾರೆ ಎಂದಿದ್ದಾರೆ.

ಜರ್ಮನಿಯಲ್ಲಿ ರಾಹುಲ್: ಮಿಲಿಂದ್ ರಮ್ಯಾ ಫೋಟೋ ಕೂಲ್!

ಸಮ್ಮಿಶ್ರ ಸರ್ಕಾರ ಚೆನ್ನಾಗಿ ಕೆಲಸ ಮಾಡುತ್ತಿದೆ. ಹಾಗೆಂದ ಮಾತ್ರಕ್ಕೆ ಮಂಡ್ಯ ಜಿಲ್ಲೆಯನ್ನು ಜೆಡಿಎಸ್‌ಗೆ ಬಿಟ್ಟುಕೊಡಲ್ಲ.‌ ಮಂಡ್ಯದಲ್ಲಿ ಇರೋದೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಫೈಟ್. ಆದ್ದರಿಂದ ಚುನಾವಣೆಗೆ ಸ್ಪರ್ಧಿಸದಿದ್ರೆ ಕಾಂಗ್ರೆಸ್ ಕಾರ್ಯಕರ್ತರನ್ನು ಕೇಳುವವರು ಇಲ್ಲದಂತಾಗುತ್ತಾರೆ. ರಮ್ಯಾ ಮತ್ತೆ ಗೆಲ್ಲುವ ಮೂಲಕ  ಜನ ಸೇವೆ ಮಾಡಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಮೈತ್ರಿಯಾಗಿ ಮಂಡ್ಯ ಕ್ಷೇತ್ರದಲ್ಲಿ ದಳಕ್ಕೆ ಬಿಟ್ಟು ಕೊಡಲು ನಾವು ತಯಾರಿಲ್ಲ. ನೂರಕ್ಕೆ ನೂರು ಮಂಡ್ಯದ ಕ್ಷೇತ್ರದ ಲೋಕಸಭೆ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷದಿಂದ ರಮ್ಯಾ ಸ್ಪರ್ಧಿಸುತ್ತಾರೆ. ಶೀಘ್ರದಲ್ಲೇ ರಮ್ಯಾ ಮಂಡ್ಯಕ್ಕೆ ವಾಪಸ್ಸಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

loader