ಕರಾವಳಿ ಪ್ರದೇಶದ ದಕ್ಷಿಣ ಕನ್ನಡ ಹಾಗೂ ಉಡುಪಿ ವ್ಯಾಪ್ತಿಯಲ್ಲಿ ಸೌದಿ ಅರೇಬಿಯಾ ಹಾಗೂ ಕೇರಳ ಚಂದ್ರದರ್ಶನ ಪದ್ಧತಿ ಜಾರಿಯಲ್ಲಿದೆ.
ಬೆಂಗಳೂರು(ಮೇ.28): ಕರಾವಳಿ ಪ್ರದೇಶದ ಕೆಲ ಜಿಲ್ಲೆಗಳನ್ನು ಹೊರತುಪಡಿಸಿದರೆ ರಾಜ್ಯಾದ್ಯಂತ ಇಂದಿನಿಂದ (ಮೇ 28ರ ಭಾನುವಾರದಿಂದ) ರಂಜಾನ್ ಉಪವಾಸ ವ್ರತಾಚರಣೆ ಆರಂಭವಾಗಲಿದೆ ಎಂದು ರಾಜ್ಯ ಚಂದ್ರ ದರ್ಶನ ಸಮಿತಿ ಹೇಳಿದೆ.
ರಾಜ್ಯ ವಕ್ಫ್ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ರಾಜ್ಯ ಚಂದ್ರದರ್ಶನ ಸಮಿತಿಯ ಅಧ್ಯಕ್ಷ ಮೌಲಾನಾ ಸಗೀರ್ ಅಹ್ಮದ್ ರಶಾದಿ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕರಾವಳಿ ಪ್ರದೇಶದ ದಕ್ಷಿಣ ಕನ್ನಡ ಹಾಗೂ ಉಡುಪಿ ವ್ಯಾಪ್ತಿಯಲ್ಲಿ ಸೌದಿ ಅರೇಬಿಯಾ ಹಾಗೂ ಕೇರಳ ಚಂದ್ರದರ್ಶನ ಪದ್ಧತಿ ಜಾರಿಯಲ್ಲಿದೆ. ಹಾಗಾಗಿ ಆ ಪ್ರದೇಶಗಳಲ್ಲಿ ಶನಿವಾರದಿಂದ ಉಪವಾಸ ಆರಂಭವಾಗಲಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಭಾನುವಾರದಿಂದ ಉಪವಾಸ ಆಚರಣೆ ಪ್ರಾರಂಭವಾಗಲಿದೆ ಎಂದು ಸಮಿತಿ ತಿಳಿಸಿದೆ.
