ಕುತೂಹಲ ಮೂಡಿಸಿದ ಎಚ್ ಡಿಕೆ - ಅಧಿಕಾರಿ ಭೇಟಿ

First Published 21, Jun 2018, 9:24 AM IST
Rangappa Meet CM HD Kumaraswamy
Highlights

ಉನ್ನತ ಶಿಕ್ಷಣ ಇಲಾಖೆ ಸಲಹೆಗಾರರಾಗಿ ನೇಮಕ ಮಾಡುವ ಮಾತುಗಳು ಕೇಳಿಬಂದ ನಡುವೆಯೇ ಕರ್ನಾಟಕ ರಾಜ್ಯ  ಮುಕ್ತ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ.ರಂಗಪ್ಪ ಮುಖ್ಯಮಂತ್ರಿಗಳ ಅಧಿಕೃತ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡುವ ಮೂಲಕ ಕುತೂಹಲ ಮೂಡಿಸಿದ್ದಾರೆ. 
 

ಬೆಂಗಳೂರು :  ಉನ್ನತ ಶಿಕ್ಷಣ ಇಲಾಖೆ ಸಲಹೆಗಾರರಾಗಿ ನೇಮಕ ಮಾಡುವ ಮಾತುಗಳು ಕೇಳಿಬಂದ ನಡುವೆಯೇ ಕರ್ನಾಟಕ ರಾಜ್ಯ  ಮುಕ್ತ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ.ರಂಗಪ್ಪ ಮುಖ್ಯಮಂತ್ರಿಗಳ ಅಧಿಕೃತ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡುವ ಮೂಲಕ ಕುತೂಹಲ ಮೂಡಿಸಿದ್ದಾರೆ. 

ಬುಧವಾರ ಕೃಷ್ಣಾಗೆ ಆಗಮಿಸಿದ ರಂಗಪ್ಪ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ರಂಗಪ್ಪ ಅವರನ್ನು ಉನ್ನತ ಶಿಕ್ಷಣ ಇಲಾಖೆ ಸಲಹೆಗಾರರನ್ನಾಗಿ ನೇಮಕ ಮಾಡಲು ಚಿಂತನೆ ನಡೆಸಿರುವ ಬೆನ್ನಲ್ಲೇ ಮುಖ್ಯಮಂತ್ರಿಗಳ ಭೇಟಿಯು ಹಲವು ಅನುಮಾನಗಳಿಗೆ ಕಾರಣವಾಗಿದೆ. 

ರಂಗಪ್ಪ ಅವರನ್ನು ಸಲಹೆಗಾರರನ್ನಾಗಿ ನೇಮಕ ಮಾಡುವ ವಿಷಯಕ್ಕೆ ಸಂಬಂಧಪಟ್ಟಂತೆ ಪ್ರತಿಪಕ್ಷ ಬಿಜೆಪಿ ಸೇರಿದಂತೆ ಹಲವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

loader