2014ರ ಜೂನ್‌'ನಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಂಜಿತ್ ಕುಮಾರ್ ಸಾಲಿಸಿಟರ್ ಜನರಲ್ ಹುದ್ದೆಗೆ ನೇಮಕಗೊಂಡಿದ್ದರು.
ನವದೆಹಲಿ(ಅ.20): ಕೇಂದ್ರ ಸರ್ಕಾರದ ಕಾನೂನು ಸಲಹೆಗಾರರಾಗಿರುವ ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ತಮ್ಮ ಸಾಲಿಸಿಟರ್ ಜನರಲ್ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ.
ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ರಾಜಿನಾಮೆ ಪತ್ರ ಸಲ್ಲಿಸಿರುವ ಅವರು, ‘ವೈಯಕ್ತಿಕ ಕಾರಣ’ಗಳಿಂದ ತಾವು ರಾಜಿನಾಮೆ ನೀಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
2014ರ ಜೂನ್'ನಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಂಜಿತ್ ಕುಮಾರ್ ಸಾಲಿಸಿಟರ್ ಜನರಲ್ ಹುದ್ದೆಗೆ ನೇಮಕಗೊಂಡಿದ್ದರು. ಇತ್ತೀಚೆಗಷ್ಟೇ ರಂಜಿತ್ ಅವರ ಸೇವೆನ್ನು ಮತ್ತೊಂದು ಅವಧಿಗೆ ಕೇಂದ್ರ ಸರ್ಕಾರ ವಿಸ್ತರಿಸಿತ್ತು.
