ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ನಡೆದಿದೆ. 14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ನಡೆದಿದೆ. 14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಆರೋಪಿ ಶ್ರೀನಿವಾಸು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ನಗರದ ನಿವಾಸಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಶ್ರೀನಿವಾಸ್ ತನ್ನ ಪಕ್ಕದ ಮನೆಯ 14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿಕೊಂಡು ಮನೆಯ ಒಳಗೆ ನುಗ್ಗಿದ ಶ್ರೀನಿವಾಸ್, ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಆಗ ಬಾಲಕಿ ಆತನ ಕಪಾಳಕ್ಕೆ ಹೊಡೆದು, ಕಿರುಚಾಟ ನಡೆಸಿದಾಗ ಅಕ್ಕಪಕ್ಕದ ಮನೆಯವರು ಬಂದು ಆರೋಪಿಯನ್ನು ಬಂಧಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
