ಗೊಂಡಾ[ಜೂ.10]: ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಮಾತ್ರ ಅತ್ಯಾಚಾರ ಎನಿಸಿಕೊಳ್ಳುತ್ತದೆ. ಆದರೆ, ವಿವಾಹಿತ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಬೇರೆಯೇ ಅರ್ಥ ಕಲ್ಪಿಸುತ್ತದೆ ಎಂದು ಉತ್ತರ ಪ್ರದೇಶ ಜಲ ಸಂಪನ್ಮೂಲ ಸಚಿವ ಉಪೇಂದ್ರ ತಿವಾರಿ ವಿವಾದಿತ ಹೇಳಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯ ವೇಳೆ ರಾಜ್ಯದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅತ್ಯಾಚಾರಕ್ಕೆ ಅದರದ್ದೇ ಆದ ಸ್ವರೂಪವಿದೆ. ಅಪ್ರಾಪ್ತ ವಯಸ್ಸಿನವರ ಮೇಲೆ ನಡೆದರೆ ಅದು ಅತ್ಯಾಚಾರ. ಮಧ್ಯ ವಯಸ್ಸಿನ ಮಹಿಳೆಯರ ಮೇಲೆ ನಡೆದರೆ ಅದು ಭಿನ್ನ ಎಂದು ಹೇಳಿಕೆ ನೀಡಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.

ಸಚಿವರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಹಲವರ ಆಕ್ರೋಶಕ್ಕೆ ಕಾರಣವಾಗಿದೆ.