ಹಾಲಿ ಮುಖ್ಯಕಾರ್ಯದರ್ಶಿ ಸುಭಾಷ ಚಂದ್ರ ಕುಂಟಿಯಾ ಅವರ ಅಧಿಕಾರವಧಿ ನವೆಂಬರ್ 30ಕ್ಕೆ ಮುಕ್ತಾಯವಾಗಲಿದ್ದು, ಮುಖ್ಯ ಕಾರ್ಯದರ್ಶಿ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿ ಕೆ. ರತ್ನಪ್ರಭಾ ಅವರ ಹೆಸರನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ. 

ಬೆಂಗಳೂರು: ಹಾಲಿ ಮುಖ್ಯಕಾರ್ಯದರ್ಶಿ ಸುಭಾಷ ಚಂದ್ರ ಕುಂಟಿಯಾ ಅವರ ಅಧಿಕಾರವಧಿ ನವೆಂಬರ್ 30ಕ್ಕೆ ಮುಕ್ತಾಯವಾಗಲಿದ್ದು, ಮುಖ್ಯ ಕಾರ್ಯದರ್ಶಿ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿ ಕೆ. ರತ್ನಪ್ರಭಾ ಅವರ ಹೆಸರನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ. ಈ ಮೂಲಕ ರಾಜ್ಯದ ಪ್ರಮುಖ ಹುದ್ದೆಗಳನ್ನು ಮಹಿಳಾ ಅಧಿಕಾರಿಗಳು ಅಲಂಕರಿಸಿದಂತಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೆ. ರತ್ನಪ್ರಭಾ ಅವರು ದಲಿತ ಸಮುದಾಯಕ್ಕೆ ಸೇರಿದ ಓರ್ವ ಮಹಿಳಾ ಅಧಿಕಾರಿ ರಾಜ್ಯ ಸರ್ಕಾರದ ಆಡಳಿತ ವಿಭಾಗದ ಮುಖ್ಯಸ್ಥ ಹುದ್ದೆಯಾದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ನೇಮಕವಾದಂತಾಗಿದೆ. ಕಳೆದ ಬಾರಿಯೇ ರತ್ನಪ್ರಭಾ ಅವರಿಗೆ ಸಿಎಸ್ ಹುದ್ದೆ ಸ್ವಲ್ಪದರಲ್ಲಿಯೇ ತಪ್ಪಿ ಹೋಗಿತ್ತು.

ಪೊಲೀಸ್ ಇಲಾಖೆ ಮಹಾ ನಿರ್ದೇಶಕಿಯಾಗಿ ಈಗಾಗಲೇ ನೀಲಮಣಿ ಎನ್. ರಾಜು ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದಲ್ಲದೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಹುದ್ದೆಗೆ ನೀಲಮಣಿ ಎನ್ ರಾಜು ಅವರ ನೇಮಕದ ದಿನಗಳಲ್ಲಿಯೇ ಕನ್ನಡಪ್ರಭ ರತ್ನಪ್ರಭಾ ಸಿಎಸ್ ಹುದ್ದೆಗೆ ನೇಮಕವಾಗಬಹುದೆಂಬ ಸುದ್ದಿಯನ್ನು ಪ್ರಕಟಿಸಿತ್ತು.