ಗೌರಿ ಲಂಕೇಶ್ ಹತ್ಯೆ ವಿಚಾರಣೆ ವೇಳೆ ಬಂಧಿತನಾಗಿದ್ದ ಭೀಮಾ ತೀರದ ಶಾರ್ಪ್ ಶೂಟರ್ ರವಿ ಬೆಳಗೆರೆಯಿಂದ ಕೊಲೆ ಸುಪಾರಿ ಪಡೆದಿದ್ದಾಗಿ ಬಾಯ್ಬಿಟ್ಟಿದ್ದಾನೆ. ವಿಜಯಪುರದ ಚಡಚಣದ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿ ಸಿಸಿಬಿ ಪೊಲೀಸರ ಮುಂದೆ ಸ್ಫೋಟಕ ಮಾಹಿತಿ ಹೊರಹಾಕಿದ್ದಾನೆ.
ಬೆಂಗಳೂರು(ಡಿ.08): ಪತ್ರಕರ್ತ ರವಿ ಬೆಳಗೆರೆ ಅವರನ್ನು ನಗರದ ಪದ್ಮನಾಭನಗರದ ನಿವಾಸದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೊಲೆಗೆ ಸುಪಾರಿ ಕೊಟ್ಟ ಆರೋಪದಡಿ ರವಿ ಬೆಳಗೆರೆ ಬಂಧನವಾಗಿದೆ.
ಹೌದು, ಗೌರಿ ಲಂಕೇಶ್ ಹತ್ಯೆ ವಿಚಾರಣೆ ವೇಳೆ ಬಂಧಿತನಾಗಿದ್ದ ಭೀಮಾ ತೀರದ ಶಾರ್ಪ್ ಶೂಟರ್ ರವಿ ಬೆಳಗೆರೆಯಿಂದ ಕೊಲೆ ಸುಪಾರಿ ಪಡೆದಿದ್ದಾಗಿ ಬಾಯ್ಬಿಟ್ಟಿದ್ದಾನೆ. ವಿಜಯಪುರದ ಚಡಚಣದ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿ ಸಿಸಿಬಿ ಪೊಲೀಸರ ಮುಂದೆ ಸ್ಫೋಟಕ ಮಾಹಿತಿ ಹೊರಹಾಕಿದ್ದಾನೆ.
ರವಿ ಬೆಳಗೆರೆ ಎರಡನೇ ಪತ್ನಿ ಜತೆ ಹಾಯ್ ಬೆಂಗಳೂರು ಪತ್ರಿಕೆ ವರದಿಗಾರ ಸನೀಲ್ ಹೆಗ್ಗರವಳ್ಳಿ ಅಕ್ರಮ ಸಂಬಂಧದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸುನೀಲ್ ಹತ್ಯೆ ಮಾಡಲು ನಿರ್ಧರಿಸಿದ್ದ ಬೆಳಗೆರೆ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಗೆ 30 ಲಕ್ಷ ರುಪಾಯಿ ಸುಪಾರಿ ಕೊಟ್ಟಿದ್ದ.
