ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಫಾರಿ ನೀಡಿದ್ದ ಕಾರಣಕ್ಕಾಗಿ ಬೆಳಗೆರೆಯನ್ನು ಬಂಧಿಸಿ ನ್ಯಾಯಾಂಗ ಬಂಧನದ ವಶಕ್ಕೆ ನೀಡಲಾಗಿತ್ತು.

ಬೆಂಗಳೂರು(ಡಿ.12): ಅನಾರೋಗ್ಯದ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹಾಯ್ ಬೆಂಗಳೂರು ವಾರಪತ್ರಿಕೆಯ ಸಂಪಾದಕ ರವಿ ಬೆಳಗೆರೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಫಾರಿ ನೀಡಿದ್ದ ಕಾರಣಕ್ಕಾಗಿ ಬೆಳಗೆರೆಯನ್ನು ಬಂಧಿಸಿ ನ್ಯಾಯಾಂಗ ಬಂಧನದ ವಶಕ್ಕೆ ನೀಡಲಾಗಿತ್ತು. ಇಂದು ಬೆಳಗ್ಗೆಯಿಂದಲೂ ಬೆಳಗೆರೆ ಆರೋಗ್ಯದಲ್ಲಿ ಏರುಪೇರಾಗಿತ್ತು. ರಕ್ತದೊತ್ತಡ ಹೆಚ್ಚಾದ ಕಾರಣ ಪರಪ್ಪನ ಅಗ್ರಹಾರದ ಜೈಲು ಅಧಿಕಾರಿಗಳು ಆಸ್ಪತ್ರೆಗೆ ಸೇರಿಸಲು ತೀರ್ಮಾನಿಸಿದ್ದಾರೆ.