ಗೌರಿ ಲಂಕೇಶ್ ಹತ್ಯೆ ವಿಚಾರವಾಗಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಹತ್ಯೆಯನ್ನು ರಾಜಕೀಯಕರಣಗೊಳಿಸಲು ಪ್ರಯತ್ನಿಸಬೇಡಿ ಎಂದು ಹೇಳಿದ್ದಾರೆ.
ನವದೆಹಲಿ: ಗೌರಿ ಲಂಕೇಶ್ ಹತ್ಯೆ ವಿಚಾರವಾಗಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಹತ್ಯೆಯನ್ನು ರಾಜಕೀಯಕರಣಗೊಳಿಸಲು ಪ್ರಯತ್ನಿಸಬೇಡಿ ಎಂದು ಹೇಳಿದ್ದಾರೆ.
ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದ್ದ ಪತ್ರಕರ್ತೆಗೆಕರ್ನಾಟಕದ ಕಾಂಗ್ರೆಸ್ ಸರ್ಕಾರ ಭದ್ರತೆ ನೀಡಲು ವಿಫಲವಾಗಿದೆ ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಗೌರಿ ಲಂಕೇಶ್ ಹತ್ಯೆಯನ್ನು ನಾವು ಖಂಡಿಸಿದ್ದೇವೆಯಾದರೂ, ನಮ್ಮ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ.ಆದರೆ ಕೇರಳ ಮತ್ತು ಕರ್ನಾಟಕದಲ್ಲಿ ನಡೆಯುವ ಆರೆಸ್ಸೆಸ್ ಕಾರ್ಯಕರ್ತರ ಹತ್ಯೆಯನ್ನು ಈ ವಿಚಾರವಾದಿಗಳು ಮತ್ತು ಬುದ್ದಿಜೀವಿಗಳು ಯಾಕೆ ಖಂಡಿಸುವುದಿಲ್ಲ? ಎಂದು ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದಾರೆ.
ಸರ್ಕಾರದ ಅನುಮತಿಯೊಂದಿಗೆ ಗೌರಿ ಲಂಕೇಶ್ ನಕ್ಸಲರನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನಿಸುತ್ತಿದ್ದರು. ಆದರೂಕರ್ನಾಟಕ ಸರ್ಕಾರ ಅವರಿಗೆಭದ್ರತೆಯನ್ನೇಕೆ ಒದಗಿಸಲಿಲ್ಲ? ಎಂದು ಅವರು ಕೇಳಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದ ರವಿಶಂಕರ್ ಪ್ರಸಾದ್, ತನಿಖೆಯು ಆರಂಭವಾಗುವ ಮುಂಚೆಯೇ ರಾಹುಲ್ ಗಾಂಧಿ ತೀರ್ಪು ಕೊಟ್ಟುಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ದಿಂದ ನಿಷ್ಪಕ್ಷಪಾತ ತನಿಖೆ ನಿರೀಕ್ಷಿಸಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.
