ಕಳೆದ ವರ್ಷ ಏಪ್ರಿಲ್ 17ರಂದು ಜಡೇಜಾ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದ ರೀವಾ ಅವರನ್ನು ವರಿಸಿದ್ದರು.
ರಾಜ್'ಕೋಟ್(ಜೂ.08): ಟೀಂ ಇಂಡಿಯಾದ ಪ್ರಮುಖ ಆಲ್ರೌಂಡರ್ ರವೀಂದ್ರ ಜಡೇಜಾ ಹೆಣ್ಣು ಮಗುವಿಗೆ ತಂದೆಯಾಗಿದ್ದಾರೆ.
ಜಡೇಜಾ ಅವರ ಪತ್ನಿ ರೀವಾ ಜಡೇಜಾ ಗುರುವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೆರಿಗೆಯಾಗಿದ್ದು, ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಚಾಂಪಿಯನ್ಸ್ ಟ್ರೋಫಿ ಸಲುವಾಗಿ ಇಂಗ್ಲೆಂಡ್'ನಲ್ಲಿರುವ ರವೀಂದ್ರ ಜಡೇಜಾ, ವಿಡಿಯೋ ಕಾನ್ಫೆರೆನ್ಸ್ ಮೂಲಕ ತಮ್ಮ ಪತ್ನಿ ಹಾಗೂ ಕುಟುಂಬ ಸದಸ್ಯರೊಂದಿಗೆ ಮಾತನಾಡಿದರು ಎಂದು ತಿಳಿದು ಬಂದಿದೆ. ಕಳೆದ ವರ್ಷ ಏಪ್ರಿಲ್ 17ರಂದು ಜಡೇಜಾ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದ ರೀವಾ ಅವರನ್ನು ವರಿಸಿದ್ದರು.
ಇದೇ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಜಡೇಜಾಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.
