ರಾಯಣ್ಣ ಬ್ರಿಗೇಡ್, ಹಿಂದುಳಿದ ವರ್ಗಗಳಿಗೆ ಹಾಗೂ ಎಲ್ಲಾ ಜನಾಂಗದ ಬಡವರಿಗೆ ನ್ಯಾಯ ದೊರಕಿಸಿಕೊಡಲು ನಿರ್ಮಾಣವಾಗಿರುವ ಸಂಘಟನೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗ (ಏ.14): ಶೀಘ್ರವೇ ರಾಯಣ್ಣ ಬ್ರಿಗೇಡ್‌’ನ ಯುವ ಘಟಕದ ರಾಜ್ಯಮಟ್ಟದ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಉಪಚುನಾವಣೆಗೂ ರಾಯಣ್ಣ ಬ್ರಿಗೇಡ್‌ಗೂ ಯಾವುದೇ ಸಂಬಂಧವಿಲ್ಲ. ರಾಯಣ್ಣ ಬ್ರಿಗೇಡ್, ಹಿಂದುಳಿದ ವರ್ಗಗಳಿಗೆ ಹಾಗೂ ಎಲ್ಲಾ ಜನಾಂಗದ ಬಡವರಿಗೆ ನ್ಯಾಯ ದೊರಕಿಸಿಕೊಡಲು ನಿರ್ಮಾಣವಾಗಿರುವ ಸಂಘಟನೆ ಎಂದು ಹೇಳಿದರು.

ಉಪ ಚುವಾವಣೆಯಲ್ಲಿ ಕಾಂಗ್ರೆಸ್ ಹಣ ಬಲದ ಜೊತೆ ಜನರ ಬಡತನವನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ.