ಶಿವಮೊಗ್ಗ (ಸೆ.17): ಆಕ್ಟೋಬರ್ 1 ರಂದು ಹಾವೇರಿಯಲ್ಲಿ ನಡೆಯಲಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶದ ಪೂರ್ವಭಾವಿ ಸಭೆಯನ್ನು ಇದೇ ತಿಂಗಳ 21 ರಂದು ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಅಯೋಜಿಸಲಾಗಿದೆ.
ಬ್ರಿಗೇಡ್ ನ ರಾಜ್ಯಾಧ್ಯಕ್ಷ ಕೊಪ್ಪಳ ಮಾಜಿ ಸಂಸದ ವಿರೂಪಾಕ್ಷಪ್ಪ ಸಭೆ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಈಶ್ವರಪ್ಪ ಪುತ್ರ ಕಾಂತೇಶ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು ಈ ಬ್ರಿಗೇಡ್ ಸಂಘ ಪರಿವಾರ ಮತ್ತು ಬಿಜೆಪಿ ಹೈಕಮಾಂಡ್ ಅಣತಿಯಂತೆ ಕಾರ್ಯನಿರ್ವಹಿಸಲಿದೆ ಎಂದ ಅವರು, ನಮೋ ಬ್ರಿಗೇಡ್ ನಂತೆಯೇ ಕಾರ್ಯನಿರ್ವಹಿಸಿ ಯಡಿಯೂರಪ್ಪನವರನ್ನು ಸಿಎಂ ಮಾಡುವ ಉದ್ದೇಶವಿದೆ ಎಂದಿದ್ದಾರೆ.
ಅಲ್ಲದೇ ಮುಂದೆ ಯಡಿಯೂರಪ್ಪನವರೇ ಬಂದು ಸಮಾವೇಶ ಉದ್ಘಾಟಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದುವರೆಗೂ ರಾಯಣ್ಣ ಬ್ರಿಗೇಡ್ ವಿಚಾರದಲ್ಲಿ ಈಶ್ವರಪ್ಪ ಹಾಗೂ ಯಡಿಯೂರಪ್ಪ ನಡುವೆ ಹುಟ್ಟಿಕೊಂಡಿದ್ದ ಅಂತರಕ್ಕೆ ಈಗ ಈಶ್ವರಪ್ಪ ಅವರ ಪುತ್ರನ ಹೇಳಿಕೆ ಇನ್ಯಾವ ಬೆಳವಣಿಗೆಗೆ ಕಾರಣವಾಗುತ್ತೋ ಅನ್ನೋ ಕುತೂಹಲಕ್ಕೆ ಕಾರಣವಾಗಿದೆ.
