ನಿರಂತರವಾಗಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಇದೀಗ ಮತ್ತೊಂದು ಶಾಕ್ ದೊರಕಿದೆ. ಆರ್ ಬಿಐ ಇದೀಗ ತನ್ನ ರೆಪೋ ದರ ಏರಿಕೆ ಮಾಡಿದೆ. 

ನವದೆಹಲಿ : ನಿರಂತರವಾಗಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಇದೀಗ ಮತ್ತೊಂದು ಶಾಕ್ ದೊರಕಿದೆ. ಆರ್ ಬಿಐ ಇದೀಗ ತನ್ನ ರೆಪೋ ದರ ಏರಿಕೆ ಮಾಡಿದೆ. 6 ರಿಂದ 6.5ಕ್ಕೆ ಏರಿಕೆ ಮಾಡಿದ್ದಾಗಿ ಆರ್‌ಬಿಐ ಗವರ್ನರ್ ಊರ್ಜಿತ್ ಪಟೇಲ್ ಮಾಹಿತಿ ನೀಡಿದ್ದಾರೆ. 

ಬರೋಬ್ಬರಿ 4 ವರ್ಷಗಳ ನಂತರ ಮೊದಲ ಬಾರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೋ ದರವನ್ನು ಏರಿಸಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆಡಳಿತ ಆರಂಭ ಮಾಡಿದ ಬಳಿಕ ಇದೇ ಮೊದಲ ಬಾರಿ ಆರ್ ಬಿಐ ರೆಪೋ ದರವನ್ನು ಏರಿಸಿದೆ.

ಇದೀಗ ಬ್ಯಾಂಕ್ ಗಳ ರೆಪೋ ದರವನ್ನು ಏರಿಕೆ ಮಾಡಿದ ಹಿನ್ನೆಲೆಯಲ್ಲಿ ಬ್ಯಾಂಕ್ ಗಳು ತನ್ನ ಗ್ರಾಹಕರಿಗೆ ನೀಡುವ ಗೃಹ ಸಾಲ ಹಾಗೂ ಅದರ ಬಡ್ಡಿ ದರ ಅಧಿಕ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ರೆಪೋ ದರ ಏರಿಕೆಯಿಂದ ದೇಶದಲ್ಲಿ ಗೃಹ ಸಾಲದ ಮೇಲಿನ ಬಡ್ಡಿದರವು ಶೇ.0.25ರಷ್ಟು ಏರಿಕೆಯಾಗಬಹುದು ಎನ್ನಲಾಗಿದೆ.

ರಿಸರ್ವ್ ಬ್ಯಾಂಕ್ ಇತರೆ ಬ್ಯಾಂಕ್ ಗಳಿಗೆ ನೀಡುವ ಸಾಲದ ಮೇಲಿನ ಬಡ್ಡಿದರವನ್ನು ರೆಪೋ ದರ ಎನ್ನಲಾಗುತ್ತದೆ.