ಎರಡೂ ಡೈರಿ ಪ್ರಕರಣಗಳನ್ನು ಸಿಬಿಐ ತನಿಖೆಗೊಳಪಡಿಸಲು ನಾವೂ ಸಿದ್ಧರಿದ್ದೇವೆಯೆಂದು ಈಶ್ವರಪ್ಪ ಹೇಳಿದ್ದಾರೆ. ಇದೇ ವೇಳೆ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲವು ಖಚಿತವೆಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಜಯಪುರ (ಮಾ.19): ಡೈರಿ ಪ್ರಕರಣವನ್ನು ಸಿಬಿಐಗೆ ನೀಡಲು ನಾವು ಸಿದ್ಧವೆಂದು ವಿಧಾನ ಪರಿಷತ್ ನಾಯಕ ಕೆ ಎಸ್ ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಜಯಪುರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್'ನವರಿಗೆ ಸರಿಯಾಗಿ ಸುಳ್ಳು ಹೇಳಲೂ ಬರುವುದಿಲ್ಲ. ಸಹಾರಾ ಪ್ರಕರಣದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಅವರಿಗೆ ಕಪ್ಪ ನೀಡಿ ದ್ದಾರೆ. ಹೀಗಾಗಿ ಆ ಪ್ರಕರಣವನ್ನು ಸಿಬಿಐಗೆ ನೀಡಿ ಎಂದು ವಾದಿಸ್ತಿದ್ದಾರೆ. ಆದರೆ ಆಗ ಮೋದಿ ಅವರು ಪ್ರಧಾನಿಯಾಗನೂ ಇರಲಿಲ್ಲ. ಅಮಿತ್ ಷಾ ಅವರು ರಾಷ್ಟ್ರಾಧ್ಯಕ್ಷರೂ ಇರಲಿಲ್ಲವೆಂದು ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ಹಾಗಂತ ನಾವು ಸಮರ್ಥಿಸಿಕೊಳ್ಳುತ್ತಿಲ್ಲ. ಎರಡೂ ಡೈರಿ ಪ್ರಕರಣಗಳನ್ನು ಸಿಬಿಐ ತನಿಖೆಗೊಳಪಡಿಸಲು ನಾವೂ ಸಿದ್ಧರಿದ್ದೇವೆಯೆಂದು ಈಶ್ವರಪ್ಪ ಹೇಳಿದ್ದಾರೆ. ಇದೇ ವೇಳೆ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲವು ಖಚಿತವೆಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.