ಬೆಂಗಳೂರು (ಸೆ.24): ಕಾವೇರಿ ವಿಚಾರದಲ್ಲಿ ಕೈಗೊಂಡಿರುವ ನಿರ್ಣಯದ ವಿಚಾರದಲ್ಲಿ ಜೆಡಿಎಸ್‌‌ನ ಬಂಡಾಯ ಶಾಸಕರು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭೇಟಿ ಬಳಿಕ ವರದಿಗಾರರೊಂದಿಗೆ ಮಾತನಾಡಿದ ನಾಗಮಂಗಲ ಶಾಸಕ ಚಲುರಾಯಸ್ವಾಮಿ, ತಮಿಳುನಾಡಿಗೆ ಕಾವೇರಿ ನೀರು ಬಿಡದಿರುವ ಐತಿಹಾಸಿ ತೀರ್ಮಾನ ತೆಗೆದುಕೊಂಡ ಸಿಎಂರನ್ನು ಮಂಡ್ಯ ಭಾಗದ ಜನರ ಪರವಾಗಿ ಅಭಿನಂದನೆ ಸಲ್ಲಿಸಿದ್ದೇನೆ ಎಂದು ಹೇಳಿದರು.

ರೈತರಿಗೆ ಬೆಳೆ ಪರಿಹಾರ ನೀಡುವ ಕುರಿತು ಕಾವೇರಿ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ಜಿ. ಮಾದೇಗೌರ ಜೊತೆಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಬಳಿಕ ರೈತರ ಬೆಳೆ ನಷ್ಟದ ಸಮೀಕ್ಷೆ ನಡೆಸಿ ಪರಿಹಾರ ನೀಡುವ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ಚೆಲುವರಾಯಸ್ವಾಮಿ ಹೇಳಿದರು.