ಸಿನೆಮಾ ಹಾಲ್‌ಗಳಲ್ಲಿ ರಾಷ್ಟ್ರಗೀತೆ ನುಡಿಸುವುದು ಕಡ್ಡಾಯ ಆದೇಶವನ್ನು ತಡೆ ಹಿಡಿಯುವಂತೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದೆ.
ನವದೆಹಲಿ(ಜ.09): ಸಿನೆಮಾ ಹಾಲ್ಗಳಲ್ಲಿ ರಾಷ್ಟ್ರಗೀತೆ ನುಡಿಸುವುದು ಕಡ್ಡಾಯ ಆದೇಶವನ್ನು ತಡೆ ಹಿಡಿಯುವಂತೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಮನವಿ ಮಾಡಿದೆ. ಆದೇಶ ಜಾರಿಗೊಂಡ ಒಂದು ವರ್ಷದ ಬಳಿಕ, ಗೃಹ ಸಚಿವಾಲಯದ ಅಧೀನ ಕಾರ್ಯದರ್ಶಿ ದೀಪಕ್ ಕುಮಾರ್ ಸರ್ಕಾರದ ಪರವಾಗಿ ಅಫಿಡವಿಟ್ ಸಲ್ಲಿಸಿದ್ದಾರೆ.
ರಾಷ್ಟ್ರಗೀತೆ ನುಡಿಸುವುದಕ್ಕೆ ಹೊಸ ಮಾರ್ಗಸೂಚಿಗಳನ್ನು ರಚಿಸಲು ಅಂತರ್ ಸಚಿವಾಲಯ ಸಮಿತಿ ರಚಿಸಲಾಗಿದೆ. ಅದರ ವರದಿ ಅಂತಿಮಗೊಳ್ಳಲು ಆರು ತಿಂಗಳು ಬೇಕಾಗುತ್ತದೆ. ಅಲ್ಲಿಯವರೆಗೆ ಆದೇಶ ತಡೆಹಿಡಿಯುವಂತೆ ಕೋರಲಾಗಿದೆ.
