ಜಗತ್ತಿನ ಅತೀ ಶ್ರೀಮಂತ ದೇಗುಲ ಎನಿಸಿಕೊಂಡಿರುವ ತಿರುಪತಿ ದೇಗುಲದಲ್ಲಿ ಇದೀಗ ಮತ್ತೊಂದು ದಾಖಲೆ ನಿರ್ಮಾಣವಾಗಿದೆ. ಗುರುವಾರ ಅತೀ ಹೆಚ್ಚು ಪ್ರಮಾಣದಲ್ಲಿ ಕಾಣಿಕೆ ಸಂಗ್ರಹವಾಗಿದೆ. 

ತಿರುಪತಿ: ಜಗತ್ತಿನ ಶ್ರೀಮಂತ ದೇಗುಲವೆಂದೇ ಪ್ರಸಿದ್ಧಿ ಪಡೆದಿರುವ ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಗುರುವಾರ ಒಂದೇ ದಿನ ದಾಖಲೆಯ 6.28 ಕೋಟಿ ರು. ಕಾಣಿಕೆ ಸಂಗ್ರಹವಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೇಗುಲದ 2000 ವರ್ಷಗಳ ಇತಿಹಾಸದಲ್ಲಿ ಒಂದೇ ದಿನದಲ್ಲಿ ಮೊದಲ ಬಾರಿ ಇಷ್ಟೊಂದು ದೊಡ್ಡ ಮೊತ್ತದ ಹಣ ಸಂಗ್ರಹವಾಗಿದೆ. 

ಈ ಹಿಂದೆ 2012, ಏ.1ರಂದು, ರಾಮ ನವಮಿಯ ಹಿನ್ನೆಲೆಯಲ್ಲಿ ಅತ್ಯಧಿಕ 5.73 ಕೋಟಿ ಸಂಗ್ರಹವಾಗಿತ್ತು. ಪ್ರತಿನಿತ್ಯ ಸಾವಿರಾರು ಭಕ್ತರು ಭೇಟಿ ನೀಡುವ ಈ ದೇವಸ್ಥಾನದಲ್ಲಿ ಸಾಮಾನ್ಯ ವಾಗಿ ದಿನಕ್ಕೆ 2.5 ಕೋಟಿ ರು.ಯಿಂದ 3.5 ಕೋಟಿ ರು. ವರೆಗೆ ಕಾಣಿಕೆ ಸಂಗ್ರಹವಾಗುತ್ತದೆ.