ಬೆಂಗಳೂರು [ಜು.20] :  ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಕೆಲವೆಡೆ ಮುಂದಿನ ಮೂರು- ನಾಲ್ಕು ದಿನ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ. 

ಅರಬ್ಬಿ ಸಮುದ್ರದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಲಕ್ಷದ್ವೀಪ ಹಾಗೂ ದಕ್ಷಿಣ ಭಾರತದ ಬಹುತೇಕ ಎಲ್ಲ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗಾಗಿ, ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸಂದೇಶ ರವಾನಿಸಿದೆ. 

ಸಮುದ್ರ ತೀರದಲ್ಲಿ ಗಂಟೆಗೆ 50 ರಿಂದ 70 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಧಾರಾಕಾರ ಮಳೆಯಾಗಲಿದೆ ಎಂದಿದೆ.