ಭಾರತ ಗಡಿಯಲ್ಲಿ ಕದನವಿರಾಮವನ್ನು ಉಲ್ಲಂಘಿಸುತ್ತಿದೆ ಮತ್ತು ಮಾನವ ಹಕ್ಕುಗಳ ದೌರ್ಜನ್ಯವೆಸಗುತ್ತಿದೆ ಎಂದು ಪಾಕಿಸ್ತಾನ ಅಧ್ಯಕ್ಷ ಮಮ್ನೂನ್‌ ಹುಸೇನ್‌ ಶುಕ್ರವಾರ ಆರೋಪಿಸಿದ್ದಾರೆ. ಭಾರತದ ಕೃತ್ಯದಿಂದಾಗಿ ಪ್ರದೇಶಿಕ ಶಾಂತಿಗೆ ಧಕ್ಕೆ ಉಂಟಾಗಿದೆ ಎಂದೂ ಅವರು ಹೇಳಿದ್ದಾರೆ.

ಇಸ್ಲಾಮಾಬಾದ್‌: ಭಾರತ ಗಡಿಯಲ್ಲಿ ಕದನವಿರಾಮವನ್ನು ಉಲ್ಲಂಘಿಸುತ್ತಿದೆ ಮತ್ತು ಮಾನವ ಹಕ್ಕುಗಳ ದೌರ್ಜನ್ಯವೆಸಗುತ್ತಿದೆ ಎಂದು ಪಾಕಿಸ್ತಾನ ಅಧ್ಯಕ್ಷ ಮಮ್ನೂನ್‌ ಹುಸೇನ್‌ ಶುಕ್ರವಾರ ಆರೋಪಿಸಿದ್ದಾರೆ. ಭಾರತದ ಕೃತ್ಯದಿಂದಾಗಿ ಪ್ರದೇಶಿಕ ಶಾಂತಿಗೆ ಧಕ್ಕೆ ಉಂಟಾಗಿದೆ ಎಂದೂ ಅವರು ಹೇಳಿದ್ದಾರೆ.

‘ಪಾಕಿಸ್ತಾನ ದಿನ’ದಂದು ಜಂಟಿ ಮಿಲಿಟರಿ ಪರೇಡ್‌ ವೀಕ್ಷಿಸಿ ಮಾತನಾಡಿದ ಮಮ್ನೂನ್‌, ಕಾಶ್ಮೀರದ ವಿಷಯವನ್ನೂ ಪ್ರಸ್ತಾಪಿಸಿದ್ದಾರೆ. ಕಾಶ್ಮೀರ ವಿವಾದಕ್ಕೆ ಇರುವ ಏಕೈಕ ಪರಿಹಾರವೆಂದರೆ ಕಾಶ್ಮೀರದ ಜನರಿಗೆ ಸ್ವಯಂ ನಿರ್ಧಾರ ಕೈಗೊಳ್ಳುವ ಅಧಿಕಾರ ನೀಡಬೇಕು. ಕಾಶ್ಮೀರದಲ್ಲಿ ಜನಮತಗಣನೆ ನಡೆಸುವ ನಿಟ್ಟಿನಲ್ಲಿ ಪಾಕಿಸ್ತಾನ ತನ್ನ ಹಸ್ತಕ್ಷೇಪವನ್ನು ಮುಂದುವರಿಸಲಿದೆ ಎಂದು ಮಮ್ನೂನ್‌ ಹುಸೇನ್‌ ಹೇಳಿದ್ದಾರೆ.

ಪಾಕಿಸ್ತಾನ ದಿನನ ಸಮಾರಂಭದಲ್ಲಿ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಭಾರತದ ಉಪ ಹೈಕಮಿಷನರ್‌ ಜೆ.ಪಿ. ಸಿಂಗ್‌ ಕೂಡ ಕಾರ್ಯಕ್ರಮಕ್ಕೆ ತೆರಳಿದ್ದರು.