ಜಾಹಿರಾತಿನಲ್ಲಿ ವಿಷ್ಣುವಿನ ಅವತಾರದಲ್ಲಿ ಕಾಣಿಸಿಕೊಳ್ಳುವ ಮೂಲಕ ಮಹೇಂದ್ರ ಸಿಂಗ್ ಧೋನಿ ಹಿಂದೂಗಳ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಆದೇಶಿಸಿದ್ದ ಜಾಮೀನುರಹಿತ ವಾರೆಂಟ್'ಅನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.

ಈ ಸಂಬಂಧ ವಿಚಾರಣೆಯನ್ನು ಆಲಿಸಿದ ಸುಪ್ರೀಂ ಕೋರ್ಟ್ ಧಾರ್ಮಿಕ ಭಾವನೆಗಳಗೆ ಯಾವುದೇ ಧಕ್ಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಭಾರತ ಏಕದಿನ ತಂಡದ ನಾಯಕನಿಗೆ ದೊಡ್ಡ ನಿರಾಳ ಸಿಕ್ಕಂತಾಗಿದೆ.

ಈ ಹಿಂದೆ ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಪುರವಣಿಯ ಮುಖಪುಟದ ಜಾಹಿರಾತಿನಲ್ಲಿ ಧೋನಿ ಕಾಣಿಸಿಕೊಳ್ಳುವ ಮೂಲಕ ಬಹುಸಂಖ್ಯಾತ ಹಿಂದೂಗಳ ಭಾವನೆಗಳಿಗೆ ಧಕ್ಕೆತಂದಿದ್ದಾರೆ ಎಂದು ಹೈಕೋರ್ಟ್'ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಕುರಿತಂತೆ ವಿಚಾರಣೆ ನಡೆಸಿದ ಉಚ್ಚನ್ಯಾಯಾಲಯವು ಜನವರಿ 9ರಂದು ಮಾಹಿಗೆ ಜಾಮೀನುರಹಿತ ವಾರೆಂಟ್ ಜಾರಿಮಾಡಿತ್ತು.

ಸುಪ್ರೀಂಕೋರ್ಟ್ ಈ ಹಿಂದೆ ಧೋನಿಯ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲು ಹೈಕೋರ್ಟ್ ನೀಡಿದ್ದ ತೀರ್ಪಿಗೆ ತಡೆ ನೀಡಿತ್ತು. ಇದರ ಜೊತೆಗೆ ಜಯಕುಮಾರ್ ಹಿರೆಮಠ್ ಅವರಿಗೂ ವಿವರಣೆ ಕೋರಿ ನೋಟಿಸ್ ಜಾರಿಮಾಡಿತ್ತು.

ಸೀಮಿತ ಓವರ್'ಗಳ ತಂಡದ ನಾಯಕ ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿರುವುದನ್ನು ಕೈಬಿಡುವಂತೆ ಉಚ್ಚ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಆದರೆ ಕರ್ನಾಟಕ ಹೈಕೋರ್ಟ್ ಅವರ ಮನವಿಯನ್ನು ತಿರಸ್ಕರಿಸಿತ್ತು.