ಪತ್ರಿಕಾಗೋಷ್ಠಿ ನೆಪದಲ್ಲಿ ಕರೆಸಿಕೊಂಡ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಬ್ಬಾಕ ರವಿ ಹಾಗೂ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ.

ತುಮಕೂರು(ಡಿ.02): ಬಿಜೆಪಿ ಮುಖಂಡರು ಹಾಗೂ ಆತನ ಬೆಂಬಲಿಗರು ಖಾಸಗಿ ವಾಹಿನಿಯ ವರದಿಗಾರನ ಮೇಲೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ತುಮಕೂರು ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪತ್ರಿಕಾಗೋಷ್ಠಿ ನೆಪದಲ್ಲಿ ಕರೆಸಿಕೊಂಡ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಬ್ಬಾಕ ರವಿ ಹಾಗೂ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ.