Asianet Suvarna News Asianet Suvarna News

ನೊಬೆಲ್ ಪ್ರಶಸ್ತಿಗೆ ಟ್ರಂಪ್ ಹೆಸರು ನಾಮನಿರ್ದೇಶನ

ವಿಶ್ವದ ಅತ್ಯಂತ ಪ್ರಸಿದ್ಧ ಹಾಗೂ ಮೌಲ್ಯಯುತವಾದ ನೊಬೆಲ್ ಪ್ರಶಸ್ತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಸರನ್ನು ನಾಮನಿರ್ದೇಶನ ಮಾಡಲಾಗಿದೆ. ಬದ್ಧ ವೈರಿಗಳಾಗಿದ್ದ ಉತ್ತರ ಮತ್ತು ದಕ್ಷಿಣ ಕೊರಿಯಾಗಳ ಶಾಂತಿ ಸ್ಥಾಪನೆಗೆ ಅಮೆರಿಕ ಅಧ್ಯಕ್ಷ ಟ್ರಂಪ್ ನೀಡಿದ ಕೊಡುಗೆ ಗುರುತಿಸಿ ಪ್ರಸಕ್ತ ವರ್ಷದ ನೊಬೆಲ್ ಶಾಂತಿ ಪುರಸ್ಕಾರಕ್ಕೆ  ರಿಪಬ್ಲಿಕನ್ ವಕ್ತಾರರು ಟ್ರಂಪ್ ಹೆಸರನ್ನು ನಾಮ ನಿರ್ದೇಶನ ಮಾಡಿದ್ದಾರೆ.

Republicans nominate Donald Trump for Nobel Peace Prize

ವಾಷಿಂಗ್ಟನ್: ವಿಶ್ವದ ಅತ್ಯಂತ ಪ್ರಸಿದ್ಧ ಹಾಗೂ ಮೌಲ್ಯಯುತವಾದ ನೊಬೆಲ್ ಪ್ರಶಸ್ತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಸರನ್ನು ನಾಮನಿರ್ದೇಶನ ಮಾಡಲಾಗಿದೆ.

 ಬದ್ಧ ವೈರಿಗಳಾಗಿದ್ದ ಉತ್ತರ ಮತ್ತು ದಕ್ಷಿಣ ಕೊರಿಯಾಗಳ ಶಾಂತಿ ಸ್ಥಾಪನೆಗೆ ಅಮೆರಿಕ ಅಧ್ಯಕ್ಷ ಟ್ರಂಪ್ ನೀಡಿದ ಕೊಡುಗೆ ಗುರುತಿಸಿ ಪ್ರಸಕ್ತ ವರ್ಷದ ನೊಬೆಲ್ ಶಾಂತಿ ಪುರಸ್ಕಾರಕ್ಕೆ  ರಿಪಬ್ಲಿಕನ್ ವಕ್ತಾರರು ಟ್ರಂಪ್ ಹೆಸರನ್ನು ನಾಮ ನಿರ್ದೇಶನ ಮಾಡಿದ್ದಾರೆ.

ನಾಮನಿರ್ದೇಶನ ಪತ್ರದಲ್ಲಿ ‘ಟ್ರಂಪ್ ಉತ್ತರ ಕೊರಿಯಾ ಅಧ್ಯಕ್ಷ ಕಿಮ್-ಜಾಂಗ್-ಉನ್ ಆಹ್ವಾನವನ್ನು ಒಪ್ಪಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. 

ಉತ್ತರ ಕೊರಿಯಾ ತನ್ನ ಪರಮಾಣು ಶಸ್ತ್ರಾಸ್ತ್ರ ಪ್ರಯೋಗ ರದ್ದು ಪಡಿಸಿ ಶಾಂತಿ ಸ್ಥಾಪನೆಗೆ ಮುಂದಾಗಲು ಟ್ರಂಪ್ ಅವಿರತ ಪ್ರಯತ್ನ ಮಾಡಿದ್ದಾರೆ ಎಂದು ಪತ್ರದಲ್ಲಿ ಹೇಳಲಾಗಿದೆ. 

Follow Us:
Download App:
  • android
  • ios