ಹುಬ್ಬಳ್ಳಿ(ಸೆ.09): ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ನಡುವೆ ಭಿನ್ನಾಭಿಪ್ರಾಯ ಇದ್ದದ್ದು ನಿಜ. ಆದರೆ, ಇಬ್ಬರ ನಡುವಿನ ಭಿನ್ನಾಭಿಪ್ರಾಯವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಬಗೆಹರಿಸಿದ್ದಾರೆ ಎಂದು ಕೇಂದ್ರ ಮಾಜಿ ಸಚಿವ, ಸಂಸದ ವೀರಪ್ಪ ಮೊಯ್ಲಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗ ರಾಜ್ಯ ಕಾಂಗ್ರೆಸ್‌ನಲ್ಲಿ ಇರುವಷ್ಟು ಒಗ್ಗಟ್ಟು ದೇಶದ ಬೇರೆ ಯಾವ ಪಕ್ಷದಲ್ಲೂ ಇಲ್ಲ. ಬಿಜೆಪಿ ಒಡೆದ ಮನೆಯಾಗಿದೆ ಎಂದರು.