ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದ ಚೆರಿಯಮನೆ ಶಶಿ (65) ಎಂಬುವರೇ ತಮ್ಮ ನಿವಾಸದಲ್ಲಿ ನಾಡ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಡಿಕೇರಿ(ಸೆ.09): ನಿವೃತ್ತ ಲೋಕಾಯುಕ್ತ ಡಿವೈಎಸ್‌ಪಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ಮುಂಜಾನೆ 4 ಗಂಟೆಗೆ ನಡೆದಿದೆ.ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದ ಚೆರಿಯಮನೆ ಶಶಿ (65) ಎಂಬುವರೇ ತಮ್ಮ ನಿವಾಸದಲ್ಲಿ ನಾಡ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರಿಗೆ ಇಬ್ಬರು ಪುತ್ರಿಯರಿದ್ದು, ಒಬ್ಬರು ವಿದೇಶದಲ್ಲಿ ಮತ್ತೊಬ್ಬರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಶಶಿ ಅವರ ಪತ್ನಿ ಒಂದು ವರ್ಷದ ಹಿಂದೆ ನಿಧನರಾಗಿದ್ದು ಆ ಬಳಿಕ ಮನೆಯಲ್ಲಿ ಏಕಾಂಗಿಯಾಗಿ ನೆಲೆಸಿದ್ದರು.
