ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳ ಕರಡು ಪಟ್ಟಿಸಿದ್ಧಪಡಿಸುವ ಸಂಬಂಧ ಉಭಯ ಪಕ್ಷಗಳ ಐವರು ಮುಖಂಡರನ್ನು ಒಳಗೊಂಡ ಸಮಿತಿ ರಚನೆಯಾಗಿದೆ.

ಬೆಂಗಳೂರು : ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳ ಕರಡು ಪಟ್ಟಿಸಿದ್ಧಪಡಿಸುವ ಸಂಬಂಧ ಉಭಯ ಪಕ್ಷಗಳ ಐವರು ಮುಖಂಡರನ್ನು ಒಳಗೊಂಡ ಸಮಿತಿ ರಚನೆಯಾಗಿದೆ.

Add Asianetnews Kannada as a Preferred SourcegooglePreferred

ಕಾಂಗ್ರೆಸ್‌ನಿಂದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ಸಚಿವರಾದ ಆರ್‌.ವಿ.ದೇಶಪಾಂಡೆ, ಡಿ.ಕೆ.ಶಿವಕುಮಾರ್‌, ಜೆಡಿಎಸ್‌ನಿಂದ ಸಚಿವ ಎಚ್‌.ಡಿ.ರೇವಣ್ಣ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಸ್‌.ಸುಬ್ರಮಣ್ಯ ಅವರು ಸಮಿತಿಯಲ್ಲಿದ್ದಾರೆ.

ಸಮಿತಿ ರಚನೆಯಾಗಿರುವುದನ್ನು ಸಮನ್ವಯ ಸಮಿತಿ ಸಂಚಾಲಕ ಹಾಗೂ ಜೆಡಿಎಸ್‌ನ ರಾಷ್ಟ್ರೀಯ ಮಹಾಪ್ರಧಾನ ಕಾರ್ಯದರ್ಶಿ ಡ್ಯಾನಿಶ್‌ ಅಲಿ ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಮಿತಿಯು ಮುಂದಿನ ಹತ್ತು ದಿನಗಳಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಕಾರ್ಯಕ್ರಮಗಳ ಪೈಕಿ ಅನುಷ್ಠಾನ ಯೋಗ್ಯವಾದವುಗಳನ್ನು ಅಂತಿಮಗೊಳಿಸಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ (ಕಾಮನ್‌ ಮಿನಿಮಮ್‌ ಪ್ರೋಗ್ರಾಮ್‌) ಕರಡು ಸಿದ್ಧಪಡಿಸಲಿದೆ. ನಂತರ ಅದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಮನ್ವಯ ಸಮಿತಿ ಸಭೆಯಲ್ಲಿ ಮತ್ತೊಮ್ಮೆ ಚರ್ಚಿಸಿ ಅಂತಿಮಗೊಳಿಸಲಾಗುತ್ತದೆ. ನಂತರ ಅದನ್ನು ಜುಲೈ ಮೊದಲ ವಾರದಲ್ಲಿ ಮಂಡಿಸಲಿರುವ ಬಜೆಟ್‌ನಲ್ಲಿ ಅಳವಡಿಸಲಾಗುತ್ತದೆ.