ಹೆಗಡೆಗೆ ಪ್ರಧಾನಿ ಮೋದಿ ಬುದ್ಧಿ ಹೇಳಬೇಕು: ರೇವಣ್ಣ

First Published 15, Feb 2018, 7:34 AM IST
Revanna slams Ananth Kumar Hegde
Highlights

ರಾಹುಲ್‌ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಕ್ತ ಪರೀಕ್ಷೆ ಮಾಡಿಸಬೇಕು ಎನ್ನುವ ಮೂಲಕ ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಅವರು ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ ಎಂದು ಸಚಿವ ರೇವಣ್ಣ ಕಿಡಿಕಾರಿದರು.

ಬೆಂಗಳೂರು : ರಾಹುಲ್‌ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಕ್ತ ಪರೀಕ್ಷೆ ಮಾಡಿಸಬೇಕು ಎನ್ನುವ ಮೂಲಕ ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಅವರು ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ ಎಂದು ಸಚಿವ ರೇವಣ್ಣ ಕಿಡಿಕಾರಿದರು.

ಅನಂತಕುಮಾರ್‌ ಹೆಗಡೆ ಅವರು ಕೇಂದ್ರ ಸಚಿವರಾಗುವ ಮುನ್ನ ಯಾರು ಎಂಬುದೇ ಹೆಚ್ಚಿನವರಿಗೆ ಗೊತ್ತಿರಲಿಲ್ಲ. ಮನಸೋ ಇಚ್ಛೇ ಹೇಳಿಕೆ ನೀಡುವ ಮೂಲಕ ಸುದ್ದಿಯಾಗುತ್ತಿದ್ದಾರೆ. ಸಂವಿಧಾನ ಬದಲಾವಣೆ ಕುರಿತು ಮಾತನಾಡುತ್ತಾರೆ.

ಸಾಹಿತಿಗಳನ್ನು ಹೊಟ್ಟೆಪಾಡಿಗೆ ಬರೆಯುವವರು ಎಂದು ಹೇಳುತ್ತಾರೆ. ವಿಚಾರವಾದಿಗಳ ಅಪ್ಪ-ಅಮ್ಮ ಯಾರು ಎಂದು ಕೇಳುತ್ತಾರೆ. ಇವರು ಮಾತ್ರ ಹಿಂದುಗಳಾ? ನಾವೆಲ್ಲ ಏನು? ಹಿಂದು ಧರ್ಮವನ್ನು ಅವರಿಗೆ ಗುತ್ತಿಗೆ ನೀಡಲಾಗಿದೆಯೇ? ಪ್ರಧಾನಿ ನರೇಂದ್ರ ಮೋದಿ ಅವರು ಹೆಗಡೆಗೆ ಬುದ್ಧಿ ಹೇಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಜನರೇ ಸರಿಯಾಗಿ ಬುದ್ಧಿ ಕಲಿಸುತ್ತಾರೆ ಎಂದು ಹೇಳಿದರು.

loader