ಬಾಗಲಕೋಟೆ(ಸೆ.08): ಸುವರ್ಣ ನ್ಯೂಸ್ ಸುದ್ದಿವಾಹಿನಿಯ ಕವರ್ ಸ್ಟೋರಿ ವಿಭಾಗದ ಮುಖ್ಯಸ್ಥೆ ವಿಜಯಲಕ್ಷ್ಮಿ ಶಿಬರೂರ ಹಾಗೂ ಕನ್ನಡಪ್ರಭದ ಹುಬ್ಬಳ್ಳಿ ಬ್ಯೂರೋ ಮುಖ್ಯಸ್ಥರಾದ ಮಲ್ಲಿಕಾರ್ಜುನ ಸಿದ್ದಣ್ಣನವರ ಅವರು ಡಾ. ನಾಗರಾಜ ಜಮಖಂಡಿ ಸ್ಮಾರಕ 2017ರ ಮಾಧ್ಯಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಾಗರಾಜ ಜಮಖಂಡಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ ನೀಡುವ ಈ ಪ್ರಶಸ್ತಿಯನ್ನು ಸೆ.9ರಂದು ಸಂಜೆ 5ಕ್ಕೆ ಗುಳೇದಗುಡ್ಡದ ಭಂಡಾರಿ ಹಾಗೂ ರಾಠಿ ಮಹಾವಿದ್ಯಾಲಯದ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.