ನವದೆಹಲಿ: 36,290 ಕೋಟಿ ರು. ವೆಚ್ಚದಲ್ಲಿ ಬೆಂಗಳೂರು ಸೇರಿ 28 ಪ್ರಮುಖ ನಗರಗಳಲ್ಲಿ ವರ್ತುಲ ರಸ್ತೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. 2022ರ ವೇಳೆಗೆ 6.92 ಲಕ್ಷ ಕೋಟಿ ರು. ವೆಚ್ಚದಲ್ಲಿ 84,000 ಕಿ.ಮೀ. ಹೆದ್ದಾರಿ ನಿರ್ಮಿಸುವ ಮಹತ್ವಾಕಾಂಕ್ಷಿ ಭಾರತ ಮಾಲಾಯೋಜನೆಯ ಭಾಗವಾಗಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ.

ದೆಹಲಿ, ಲಖನೌ, ಬೆಂಗಳೂರು, ರಾಂಚಿ, ಪಟನಾ, ಸೇರಿ ಪ್ರಮುಖ ನಗರಗಳಲ್ಲಿ 36,290 ಕೋಟಿ ರು. ವೆಚ್ಚದಲ್ಲಿ ವರ್ತುಲ ರಸ್ತೆಗಳನ್ನು ನಿರ್ಮಿಸಲು ಯೋಜಿಸಲಾಗಿದೆ. ಜತೆಗೆ 40 ಬೈಪಾಸ್ ರಸ್ತೆಗಳ ನಿರ್ಮಾಣಕ್ಕೂ ಉದ್ದೇಶಿಸಲಾಗಿದೆ ಎಂದು ಗಡ್ಕರಿ ಹೇಳಿದ್ದಾರೆ.