ಶ್ರೀನಗರ(ಅ.31): ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಬಳಿಕ, ಕಣಿವೆಯನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳೆಂದು ವಿಭಾಗಿಸಲಾಗಿದೆ.  

ಸತ್ಯಪಾಲ್​ ಮಲಿಕ್​ ಎತ್ತಂಗಡಿ: ಜಮ್ಮು-ಕಾಶ್ಮೀರ, ಲಡಾಖ್​​ಗೆ ಹೊಸ ಗವರ್ನರ್​ಗಳ ನೇಮಕ

ಅದರಂತೆ ಲಡಾಕ್ ಕೇಂದ್ರಾಡಳಿತ ಪ್ರದೇಶದ ಮೊದಲ ಲೆಫ್ಟಿನೆಂಟ್ ಗವರ್ನರ್ ಆಗಿ ರಾಧಾ ಕೃಷ್ಣ ಮಾಥೂರ್ ಇಂದು ಪ್ರಮಾಣವಚನ ಸ್ವೀಕರಿಸಿದರು.  ಜಮ್ಮು-ಕಾಶ್ಮೀರ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ನ್ಯಾಯಾಧೀಶ ಗೀತಾ ಮಿತ್ತಲ್ ಮಾಥೂರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

‘370 ರದ್ದತಿ ಅಪಹಾಸ್ಯ ಮಾಡಿದವರನ್ನು ಇತಿಹಾಸ ನೋಡಿಕೊಳ್ಳುತ್ತೆ’!

ಅಲ್ಲದೇ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳಿಗೆ ನೂತನ ಗವರ್ನರ್ ಆಗಿ ಗಿರೀಶ್ ಚಂದ್ರ ಮುರ್ಮು ಅಧಿಕಾರ ವಹಿಸಿಕೊಂಡರು. ಶ್ರೀನಗರದಲ್ಲಿ ನಡೆದ ಸಮಾರಂಭದಲ್ಲಿ ಮುರ್ಮು ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ದಶಕಗಳ ಕಾಲ ಜಮ್ಮು -ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಸಂವಿಧಾನ ವಿಧಿ 370ನ್ನು ರದ್ದುಪಡಿಸಿದ ಸುಮಾರು 3 ತಿಂಗಳ ನಂತರ ಜಮ್ಮು ಮತ್ತು ಕಾಶ್ಮೀರ ಎಂದು ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ರಚಿಸಲಾಗಿದೆ.

ಜಮ್ಮು ಕಾಶ್ಮೀರದಲ್ಲಿ ಇಂದಿನಿಂದ ಹೊಸ ಅಧ್ಯಾಯ! ಏನೇನು ಬದಲಾಗಲಿದೆ?


ಇದುವರೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್ ಅವರನ್ನು ಗೋವಾ ರಾಜ್ಯಪಾಲರಾಗಿ ವರ್ಗಾಯಿಸಲಾಗಿದೆ.