ಬೆಳಗಾವಿ : ಜವರಾಯ ಅಟ್ಟಹಾಸ ಮೆರೆದಿದ್ದು ಬೈಕ್ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ,  ಬೈಕ್ ನಲ್ಲಿದ್ದ ತಾಯಿ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತಾಯಿ ಸುಜಾತಾ ಕಣವಿ, ಮಗು ಪ್ರೀತಮ್  ಮೃತ ದುರ್ದೈವಿಗಳಾಗಿದ್ದಾರೆ.  ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದಕವಿ ಗ್ರಾಮದ ಬಳಿ ಗಣೇಶ ಹಬ್ಬದಂದೆ  ದುರ್ಘಟನೆ ಸಂಭವಿಸಿದೆ. 

ಪತಿ ಸೇರಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಗಾಯಗಳು ರಾಮದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಸ್ಥಳಕ್ಕೆ ರಾಮದುರ್ಗ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಸಂಬಂಧ ಇದೀಗ ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.