ಮೈಸೂರು ಪ್ರವಾಸ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಚಿತ್ರದುರ್ಗದ ಹೊರವಲಯದ ಸಿಬಾರದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಐವರು ಮೃತಪಟ್ಟಿದ್ದು, ಹಲವರಿಗೆ ತೀವ್ರವಾಗಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರಗೆ ದಾಖಲಿಸಲಾಗಿದೆ.
ಚಿತ್ರದುರ್ಗ(ಜ.08): ಸೋಮವಾರವಿಂದು ಸಾವಿನ ಸೋಮವಾರವಾಗಿ ಬದಲಾಗಿದೆ. ಬೆಂಗಳೂರಿನ ಬಾರ್'ವೊಂದರಲ್ಲಿ ಅಗ್ನಿ ಅವಘಡವಾದ ಬೆನ್ನಲ್ಲೇ, ಚಿತ್ರದುರ್ಗ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರೂಸರ್-ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ.
ಮೈಸೂರು ಪ್ರವಾಸ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಚಿತ್ರದುರ್ಗದ ಹೊರವಲಯದ ಸಿಬಾರದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಐವರು ಮೃತಪಟ್ಟಿದ್ದು, ಹಲವರಿಗೆ ತೀವ್ರವಾಗಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರಗೆ ದಾಖಲಿಸಲಾಗಿದೆ.
ಮೃತರನ್ನು ಮನ್ಯಾಳು ಗ್ರಾಮದ ಸಿದ್ಧಾರ್ಥ, ರಾಕೇಶ್, ಶಿವಲಿಂಗು, ವಿನೋದ್, ಕ್ರೂಸರ್ ಶಿವಲಿಂಗ್ ಎಂದು ಗುರುತಿಸಲಾಗಿದೆ. ಇನ್ನು ಮನ್ಯಾಳು ಗ್ರಾಮದ 8 ಮಂದಿ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.