ಬೃಹನ್ಮುಂಬಯಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಯಾರಿಗೂ ಸ್ಪಷ್ಟ ಬಹುಮತ ಸಿಗದೇ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು. ಹಳೇ ದೋಸ್ತಿಗಳಾದ ಬಿಜೆಪಿ-ಶಿವಸೇನೆ ಮತ್ತೆ ಮೈತ್ರಿ ಮಾಡಿಕೊಂಡಿದೆ. ಮೇಯರ್, ಉಪಮೇಯರ್ ಹುದ್ದೆಯ ಗುದ್ದಾಟ ಅಂತ್ಯಗೊಂಡಿದೆ. ಶಿವಸೇನೆ ಪಕ್ಷದ ಅಭ್ಯರ್ಥಿ ಮೇಯರ್ ಆಗಲು ಬಿಜೆಪಿ ಬೆಂಬಲಿಸಿದೆ.
ಮುಂಬೈ (ಮಾ.04): ಬೃಹನ್ಮುಂಬಯಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಯಾರಿಗೂ ಸ್ಪಷ್ಟ ಬಹುಮತ ಸಿಗದೇ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು. ಹಳೇ ದೋಸ್ತಿಗಳಾದ ಬಿಜೆಪಿ-ಶಿವಸೇನೆ ಮತ್ತೆ ಮೈತ್ರಿ ಮಾಡಿಕೊಂಡಿದೆ. ಮೇಯರ್, ಉಪಮೇಯರ್ ಹುದ್ದೆಯ ಗುದ್ದಾಟ ಅಂತ್ಯಗೊಂಡಿದೆ. ಶಿವಸೇನೆ ಪಕ್ಷದ ಅಭ್ಯರ್ಥಿ ಮೇಯರ್ ಆಗಲು ಬಿಜೆಪಿ ಬೆಂಬಲಿಸಿದೆ.
ಮೇಯರ್ ಹಾಗೂ ಉಪ ಮೇಯರ್ ಹುದ್ದೆಗೆ ನಾವು ಅಭ್ಯರ್ಥಿಗಳನ್ನು ನಿಲ್ಲಿಸುವುದಿಲ್ಲ ಎಂದು ಮಹಾರಾಷ್ಟ್ರ ಸಿಎಂ ದೇವೆಂದ್ರ ಫಡ್ನವೀಸ್ ಅಧಿಕೃತವಾಗಿ ಹೇಳಿದ್ದಾರೆ. ನಾವು ಪ್ರತಿಪಕ್ಷವಾಗಿ ಕೆಲಸ ಮಾಡುವುದಿಲ್ಲ. ಮೇಯರ್ ಚುನಾವಣೆಗೆ ಶಿವಸೇನೆಗೆ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಫಡ್ನವೀಸ್ ಹೇಳಿದ್ದಾರೆ.
ಇದಕ್ಕೆ ಸುಬ್ರಮಣಿಯನ್ ಸ್ವಾಮಿ ಬಿಜೆಪಿ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಹಿಂದುತ್ವಕ್ಕೆ ಜೈ ಅಂದಿದ್ದಾರೆ.
