ಮಧ್ಯರಾತ್ರಿ 2.30ರ ಸಮಯದಲ್ಲಿ ಮನೆಗೆ ನುಗ್ಗಿದ ದರೋಡೆಕೋರರು ಮನೆಯಯವರ ಮೇಲೆ ಹಲ್ಲೆ ನಡೆಸಿ ನಗ-ನಾಣ್ಯ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಕೆ.ಆರ್​.ಪುರದಲ್ಲಿ ನಡೆದಿದೆ.

ಬೆಂಗಳೂರು (ಏ.01): ಮಧ್ಯರಾತ್ರಿ 2.30ರ ಸಮಯದಲ್ಲಿ ಮನೆಗೆ ನುಗ್ಗಿದ ದರೋಡೆಕೋರರು ಮನೆಯಯವರ ಮೇಲೆ ಹಲ್ಲೆ ನಡೆಸಿ ನಗ-ನಾಣ್ಯ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಕೆ.ಆರ್​.ಪುರದಲ್ಲಿ ನಡೆದಿದೆ.

ಇಲ್ಲಿನ ಸೀಗೆಹಳ್ಳಿ ಸಮೀಪದ ವೈಟ್ ಸಿಟಿ ಬಡಾವಣೆಯ ಪಾರ್ಥಿವ್ ಎಂಬುವವರ ಮನೆಗೆ ನುಗ್ಗಿದ 7 ಜನ ದರೋಡೆಕೋರರು, ಮನೆಯಲ್ಲಿದ್ದ ನಾಲ್ವರ ಮೇಲೆ ರಾಡ್​ನಿಂದ ಹಲ್ಲೆ ನಡೆಸಿ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ 2.60 ಲಕ್ಷ ನಗದನ್ನು ದೋಚಿ ಪರಾರಿಯಾಗಿದ್ದಾರೆ. ಮನೆ ಮಾಲೀಕ ಪಾರ್ಥಿಬನ್ ಕೋಣೆಗೆ ನುಗ್ಗಿ ಬಾಯಿಗೆ ಪಿಸ್ತೂಲ್ ಬಾಯಿಗೆಯಿಟ್ಟು ಹಲ್ಲೆ ನಡೆಸಿದ್ದಾರೆ. ಕೈ-ಕಾಲು ಕಟ್ಟಿ ಬೆದರಿಸಿ, ಹೆಂಡತಿ ಮತ್ತು ಮಗಳ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಪಾರ್ಥಿಬನ್ ತಿಳಿಸಿದರು.

ದರೋಡೆಕೋರರು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತಾನಾಡಿಕೊಳ್ಳುತ್ತಿದ್ದರೆಂದು ಪಾರ್ಥಿಬನ್ ಹೇಳಿದ್ದಾರೆ. ಗಾಯಗೊಂಡವರನ್ನು ಕೆ.ಆರ್.ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕೆ.ಆರ್.ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.