Asianet Suvarna News Asianet Suvarna News

ರೋಹಿಂಗ್ಯಾ ಮುಸ್ಲಿಮರಿಗೆ ಗೇಟ್ಪಾಸ್?

ಮ್ಯಾನ್ಮಾರ್‌'ನಲ್ಲಿ ತಮ್ಮ ವಿರುದ್ಧ ಸೇನೆ ಆರಂಭಿಸಿರುವ ಕಾರ್ಯಾಚರಣೆಗೆ ಹೆದರಿ ದೇಶ ತೊರೆಯುತ್ತಿರುವ ರೋಹಿಂಗ್ಯಾ ಮುಸ್ಲಿಮರ ಕುರಿತು ಚರ್ಚೆ ನಡೆಯುತ್ತಿರುವಾಗಲೇ, ತನ್ನ ನೆಲದಲ್ಲಿ ಬೀಡುಬಿಟ್ಟಿರುವ ರೋಹಿಂಗ್ಯಾ ಮುಸ್ಲಿಮರನ್ನು ಮ್ಯಾನ್ಮಾರ್ ಗೆ ಗಡೀಪಾರು ಮಾಡಲು ಭಾರತ ಮುಂದಾಗಿದೆ. ಈ ಸಂಬಂಧ ಸುಪ್ರೀಂಕೋರ್ಟ್‌ಗೆ ಸೋಮವಾರ ಪ್ರಮಾಣ ಪತ್ರ ಸಲ್ಲಿಸಲು ಉದ್ದೇಶಿಸಿದೆ. ಈ ಕುರಿತು ಗೃಹ ಸಚಿವ ರಾಜನಾಥ ಸಿಂಗ್ ಅವರೇ ಮಾಹಿತಿ ನೀಡಿದ್ದಾರೆ.

Rohingya refugees deportation

ನವದೆಹಲಿ(ಸೆ.16): ಮ್ಯಾನ್ಮಾರ್‌'ನಲ್ಲಿ ತಮ್ಮ ವಿರುದ್ಧ ಸೇನೆ ಆರಂಭಿಸಿರುವ ಕಾರ್ಯಾಚರಣೆಗೆ ಹೆದರಿ ದೇಶ ತೊರೆಯುತ್ತಿರುವ ರೋಹಿಂಗ್ಯಾ ಮುಸ್ಲಿಮರ ಕುರಿತು ಚರ್ಚೆ ನಡೆಯುತ್ತಿರುವಾಗಲೇ, ತನ್ನ ನೆಲದಲ್ಲಿ ಬೀಡುಬಿಟ್ಟಿರುವ ರೋಹಿಂಗ್ಯಾ ಮುಸ್ಲಿಮರನ್ನು ಮ್ಯಾನ್ಮಾರ್ ಗೆ ಗಡೀಪಾರು ಮಾಡಲು ಭಾರತ ಮುಂದಾಗಿದೆ. ಈ ಸಂಬಂಧ ಸುಪ್ರೀಂಕೋರ್ಟ್‌ಗೆ ಸೋಮವಾರ ಪ್ರಮಾಣ ಪತ್ರ ಸಲ್ಲಿಸಲು ಉದ್ದೇಶಿಸಿದೆ. ಈ ಕುರಿತು ಗೃಹ ಸಚಿವ ರಾಜನಾಥ ಸಿಂಗ್ ಅವರೇ ಮಾಹಿತಿ ನೀಡಿದ್ದಾರೆ.

ದೇಶದಲ್ಲಿ 14 ಸಾವಿರ ರೋಹಿಂಗ್ಯಾ ಮುಸ್ಲಿಮರು ಇದ್ದಾರೆ ಎಂದು ಆ.9ರಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿತ್ತು. ಆದರೆ ಕೆಲವು ಮಾಹಿತಿಗಳ ಪ್ರಕಾರ, ಭಾರತದಲ್ಲಿ ನೆಲೆಸಿರುವ ರೋಹಿಂಗ್ಯಾ ಮುಸ್ಲಿಮರ ಸಂಖ್ಯೆ 40 ಸಾವಿರದಷ್ಟಿದೆ. ಇವರೆಲ್ಲಾ ಜಮ್ಮು, ಹೈದರಾಬಾದ್, ಹರ್ಯಾಣ, ಉತ್ತರಪ್ರದೇಶ, ದೆಹಲಿ- ರಾಷ್ಟ್ರ ರಾಜಧಾನಿ ವಲಯ ಹಾಗೂ ರಾಜಸ್ಥಾನದಲ್ಲಿ ನೆಲೆ ನಿಂತಿದ್ದಾರೆ. ಇವರಿಂದ ದೇಶದ ಭದ್ರತೆಗೆ ಅಪಾಯ ಎಂಬುದು ಸರ್ಕಾರದ ಭಾವನೆ ಎನ್ನಲಾಗಿದೆ.

ಆಶ್ರಯ ಕೊಡಿ- ಒವೈಸಿ:

ರೋಹಿಂಗ್ಯಾ ಮುಸ್ಲಿಮರನ್ನು ಮ್ಯಾನ್ಮಾರ್‌ಗೆ ಗಡೀಪಾರು ಮಾಡುವ ಕೇಂದ್ರ ಸರ್ಕಾರ ನಿಲುವಿಗೆ ಎಂಐಎಂ ಪಕ್ಷದ ಸಂಸದ ಅಸಾದುದ್ದೀನ್ ಒವೈಸಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 65 ಸಾವಿರ ತಮಿಳರಿಗೆ, ಒಂದು ಲಕ್ಷ ಟಿಬೆಟ್ ನಿರಾಶ್ರಿತರಿಗೆ, ಬಾಂಗ್ಲಾ ವಿವಾದಿತ ಲೇಖಕಿ ತಸ್ಲೀಮಾ ನಸ್ರೀನ್‌ಗೆ ದೇಶದಲ್ಲಿ ಆಶ್ರಯ ಕೊಡಲಾಗಿದೆ. ಹೀಗಾಗಿ ರೋಹಿಂಗ್ಯಾ ಮುಸ್ಲಿಮರನ್ನು ತಮ್ಮ ‘ಸೋದರರು ಅಥವಾ ಸ್ನೇಹಿತರು’ ಎಂದು ಪ್ರಧಾನಿ ನರೇಂದ್ರ ಮೋದಿ ಸ್ವೀಕರಿಸಬಾರದೇಕೆ ಎಂದು ಪ್ರಶ್ನಿಸಿದ್ದಾರೆ.

ವಾಪಸ್ ಕರೆಸಿಕೊಳ್ಳಲು ಭಾರತ ಒತ್ತಡ:

ಮ್ಯಾನ್ಮಾರ್‌'ನ ರಾಖೈನ್ ರಾಜ್ಯದಲ್ಲಿನ ರೋಹಿಂಗ್ಯಾ ಮುಸ್ಲಿಮರ ಪೈಕಿ ಶೇ.40ರಷ್ಟು ಮಂದಿ ಬಾಂಗ್ಲಾದೇಶಕ್ಕೆ ವಲಸೆ ಹೋಗಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ರೋಹಿಂಗ್ಯಾಗಳನ್ನು ವಾಪಸ್ ಕರೆಸಿಕೊಳ್ಳುವಂತೆ ಮ್ಯಾನ್ಮಾರ್‌ನ ಮೇಲೆ ಒತ್ತಡ ಹೇರುತ್ತಿರುವುದಾಗಿ ಈವರೆಗೆ 4 ಲಕ್ಷದಷ್ಟು ರೋಹಿಂಗ್ಯಾ ಮುಸ್ಲಿಮರಿಗೆ ಆಶ್ರಯ ನೀಡಿರುವ ಬಾಂಗ್ಲಾದೇಶಕ್ಕೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.

 

Follow Us:
Download App:
  • android
  • ios