ಬೆಂಗಳೂರು ದಕ್ಷಿಣ ಡಿಸಿಪಿಯಾಗಿ ರೋಹಿಣಿ, ಅಣ್ಣಾಮಲೈರಿಂದ ಅಧಿಕಾರ ಹಸ್ತಾಂತರ
ಕೋಲಾರದ ಪೊಲೀಸ್ ವರಿಷ್ಠಾಧಿಕಾರಿಯಾದ್ದ ರೋಹಿಣಿ ಅವರು ಈಗ ಬೆಂಗಳೂರು ದಕ್ಷಿಣ ಡಿಸಿಪಿಯಾಗಿ ವರ್ಗಾವಣೆಗೊಂಡಿದ್ದು, ಇಂದು ಅಧಿಕಾರ ಸ್ವೀಕರಿಸಿದರು.
ಬೆಂಗಳೂರು, [ಜೂನ್.10]: ಕರ್ನಾಟಕದ ಸಿಂಗಂ ಎಂದೇ ಹೆಸರಾಗಿದ್ದ ಕೆ.ಅಣ್ಣಾಮಲೈ ಅವರ ರಾಜೀನಾಮೆಯಿಂದ ತೆರವಾಗಿದ್ದ ಬೆಂಗಳೂರು ದಕ್ಷಿಣ ಡಿಸಿಪಿ ಸ್ಥಾನಕ್ಕೆ ರೋಹಿಣಿ ಕಟೋಚ್ ಸೆಪಟ್ ನೇಮಕಗೊಂಡಿದ್ದಾರೆ.
ಇಂದು [ಸೋಮವಾರ] ಬೆಂಗಳೂರಿನ ಕಚೇರಿಯಲ್ಲಿ ರೋಹಿಣಿ ಕಟೋಚ್ ಸೆಪಟ್ ಅವರಿಗೆ ಅಣ್ಣಾಮಲೈ ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು.ಬಳಿಕ ಅಣ್ಣಾಮಲೈ ಅವರೊಂದಿಗೆ ಸಿಬ್ಬಂದಿ ಸೆಲ್ಫಿ ತೆಗೆದುಕೊಂಡು ಸಂತಸಪಟ್ಟರು.
9 IPS ಅಧಿಕಾರಿಗಳ ವರ್ಗಾವಣೆ: ಅಣ್ಣಾಮಲೈ ಜಾಗಕ್ಕೆ ರೋಹಿಣಿ
ರೋಹಿಣಿ ಕಟೋಚ್ ಸೆಪಟ್ ಅವರು ಈ ಹಿಂದೆ ಕೋಲಾರದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಣ್ಣಾಮಲೈ ಅವರು ರಾಜೀನಾಮೆ ನೀಡಿದ ಹಿನ್ನೆಲೆ ಬೆಂಗಳೂರು ದಕ್ಷಿಣ ಡಿಸಿಪಿಯಾಗಿ ರೋಹಿಣಿ ಕಟೋಚ್ ಸೆಪಟ್ರನ್ನು ಸರ್ಕಾರ ವರ್ಗಾವಣೆ ಮಾಡಿತ್ತು.