ರೋಹಿಣಿ ಸಿಂಧೂರಿ ಅರ್ಜಿ ಇಂದು ವಿಚಾರಣೆ

First Published 27, Mar 2018, 7:22 AM IST
Rohini Sindhuri fighting transfer battle
Highlights

ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ತಮ್ಮನ್ನು ವರ್ಗಾವಣೆ ಮಾಡಿದ್ದ ಆದೇಶವನ್ನು ಮರುಪರಿಶೀಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಲು ಸೂಚಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ನೀಡಿದ್ದ ಆದೇಶ ಪ್ರಶ್ನಿಸಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಮಂಗಳವಾರ ಹೈಕೋರ್ಟ್‌ ವಿಭಾಗೀಯ ಪೀಠದಲ್ಲಿ ನಡೆಯಲಿದೆ.

ಬೆಂಗಳೂರು : ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ತಮ್ಮನ್ನು ವರ್ಗಾವಣೆ ಮಾಡಿದ್ದ ಆದೇಶವನ್ನು ಮರುಪರಿಶೀಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಲು ಸೂಚಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ನೀಡಿದ್ದ ಆದೇಶ ಪ್ರಶ್ನಿಸಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಮಂಗಳವಾರ ಹೈಕೋರ್ಟ್‌ ವಿಭಾಗೀಯ ಪೀಠದಲ್ಲಿ ನಡೆಯಲಿದೆ.

ಸೋಮವಾರ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್‌ ಪ್ರಸಾದ್‌ ಅವರ ಪೀಠದ ಮುಂದೆ ಹಾಜರಾದ ರೋಹಿಣಿ ಸಿಂಧೂರಿ ಪರ ವಕೀಲರು, ಅರ್ಜಿದಾರರು ತಮ್ಮ ವರ್ಗಾವಣೆ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥ ಪಡಿಸಿರುವ ಸಿಎಟಿ ಮಾ.26ರ ಒಳಗೆ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಲು ಸೂಚಿಸಿದೆ.

ಆದ್ದರಿಂದ ಇಂದೇ ಅರ್ಜಿ ವಿಚಾರಣೆಗೆ ಪರಿಗಣಿಸಬೇಕು. ಅಲ್ಲದೆ, ಸಿಎಟಿ ಆದೇಶದಂತೆ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದ್ದು, ನಾಳೆ ಸರ್ಕಾರ ಕ್ರಮಕ್ಕೆ ಮುಂದಾಗುವ ಸಾಧ್ಯತೆಯಿದೆ. ಹೀಗಾಗಿ ಅರ್ಜಿಯ ತುರ್ತು ವಿಚಾರಣೆ ನಡೆಸಿ ಸಿಎಟಿ ಆದೇಶಕ್ಕೆ ತಡೆ ನೀಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಈ ಮನವಿ ತಿರಸ್ಕರಿಸಿದ ನ್ಯಾಯಪೀಠ, ಅರ್ಜಿಯು ಈಗಾಗಲೇ ಮಂಗಳವಾರ ವಿಚಾರಣೆಗೆ ನಿಗದಿಯಾಗಿದೆ. ಹೀಗಿರುವಾಗ ಇಂದೇ ತುರ್ತು ವಿಚಾರಣೆ ನಡೆಸುವ ಅಗತ್ಯವಿಲ್ಲವೆಂದ ನ್ಯಾಯಪೀಠ, ನಾಳೆಯೇ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತು.

loader