ಕೋರ್ಟ್ ಮೆಟ್ಟಿಲೇರಿದ ರೋಹಿಣಿ ಸಿಂಧೂರಿ

news | Saturday, April 21st, 2018
Sujatha NR
Highlights

ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ತಮ್ಮನ್ನು ವರ್ಗಾವಣೆ ಮಾಡಿದ್ದ ಸರ್ಕಾರದ ಆದೇಶ ಪ್ರಶ್ನಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ತಮ್ಮನ್ನು ವರ್ಗಾವಣೆ ಮಾಡಿದ್ದ ಸರ್ಕಾರದ ಆದೇಶ ಪ್ರಶ್ನಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸರ್ಕಾರದ ವರ್ಗಾವಣೆ ಆದೇಶ ಮತ್ತು ಆ ಆದೇಶ ಎತ್ತಿಹಿಡಿದ ಸಿಎಟಿ ತೀರ್ಪು ರದ್ದುಪಡಿಸುವಂತೆ ಕೋರಿ ರೋಹಿಣಿ ಸಿಂಧೂರಿ ದಾಸರಿ ಶುಕ್ರವಾರ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ, ಅರ್ಜಿ ಇತ್ಯರ್ಥವಾಗುವವರೆಗೂ ವರ್ಗಾ ವಣೆ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಮಧ್ಯಂತರ ಮನವಿ ಮಾಡಿದ್ದಾರೆ.

ಈ ಅರ್ಜಿ ಸೋಮವಾರ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬರುವ ನಿರೀಕ್ಷೆ ಇದೆ. ಈ ಮಧ್ಯೆ ಹಾಲಿ ಹಾಸನ ಜಿಲ್ಲಾಧಿಕಾರಿಯಾಗಿರುವ ರಂದೀಪ್ ಸಹ ಹೈಕೋರ್ಟ್‌ಗೆ ಕೇವಿಯಟ್ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ವಾದ ಆಲಿಸದೇ ರೋಹಿಣಿ ಅರ್ಜಿ ಕುರಿತು ಯಾವುದೇ ಆದೇಶ ಹೊರಡಿಸಬಾರದು ಎಂದು ರಂದೀಪ್ ತಮ್ಮ ಅರ್ಜಿಯಲ್ಲಿ ಕೋರಿ ದ್ದಾರೆ.

Comments 0
Add Comment

  Related Posts

  SC ST Act Effect May Enter Karnataka Part 2

  video | Thursday, April 5th, 2018

  SC ST Act Effect May Enter Karnataka Part 2

  video | Thursday, April 5th, 2018

  SC ST Act Effect May Enter Karnataka Part 1

  video | Thursday, April 5th, 2018

  SC ST Act Effect May Enter Karnataka Part 1

  video | Thursday, April 5th, 2018

  SC ST Act Effect May Enter Karnataka Part 2

  video | Thursday, April 5th, 2018
  Sujatha NR