ರೋಹಿಣಿ ಅವರು ಜೆಡಿಎಸ್ ಮುಖಂಡರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಅವರನ್ನು ವರ್ಗಾವಣೆ ಮಾಡಬೇಕೆಂದು ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು.

ಬೆಂಗಳೂರು(22): ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ(ಕೆಎಸ್ಐಡಿಸಿ)ಗೆ ಎಂಡಿಯಾಗಿ ವರ್ಗಾವಣೆ ಮಾಡಲಾಗಿದೆ.

ರೋಹಿಣಿ ಅವರು ಜೆಡಿಎಸ್ ಮುಖಂಡರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಅವರನ್ನು ವರ್ಗಾವಣೆ ಮಾಡಬೇಕೆಂದು ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು. ಈ ಬಗ್ಗೆ ಸಿಎಂ ಕೂಡ ಭರವಸೆ ನೀಡಿದ್ದರು. ಜನಪ್ರತಿನಿಧಿಗಳ ರಾಜಕೀಯ ಪರಚಾಟಕ್ಕೆ ದಕ್ಷ ಅಧಿಕಾರಿಯೊಬ್ಬರು ಎತ್ತಂಗಡಿಯಾಗಿದ್ದಾರೆ.

ಮಂಡ್ಯದಲ್ಲಿ ಜಿಲ್ಲೆಯಾದ್ಯಂದ ಸ್ವಚ್ಛತಾ ಅಭಿಯಾನದಡಿ ಶೌಚಾಲಯ ನಿರ್ಮಾಣ ಮಾಡುವ ಮೂಲಕ ರಾಜ್ಯದ್ಯಂತ ಉತ್ತಮ ಹೆಸರು ಪಡೆದುಕೊಂಡಿದ್ದರು.ಇವರಲ್ಲದೆ ಒಟ್ಟು 7 ಮಂದಿಯನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿದೆ.