ಬೆಂಗಳೂರು :  ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಮಾರ್ಗಗಳ ಬದಲಾವಣೆ ಮಾಡಲಾಗಿದೆ. 

ಎಂ.ಜಿ.ರಸ್ತೆಯಲ್ಲಿ, ಕ್ವೀನ್ಸ್ ವೃತ್ತದ ಕಡೆಯಿಂದ ಹಲಸೂರು ಕಡೆ ಸಾಗುವ ವಾಹನಗಳು ಅನಿಲ್ ಕುಂಬ್ಳೆ ವೃತ್ತದಲ್ಲಿ ಎಡ ತಿರುವು ಪಡೆದು, ಸೆಂಟ್ರಲ್ ಸ್ಟ್ರೀಟ್, ಬಿಆರ್‌ವಿ ಜಂಕ್ಷನ್‌ನಲ್ಲಿ ಬಲ ತಿರುವು ಪಡೆಯುವ ಮೂಲಕ ಕಬ್ಬನ್ ರಸ್ತೆಯಿಂದ ವೆಬ್ಸ್ ಜಂಕ್ಷನ್‌ಗೆ ಹೋಗಬಹುದು. 

ಎಂ.ಜಿ.ರಸ್ತೆಯಲ್ಲಿ ಟ್ರಿನಿಟಿ ವೃತ್ತದ ಕಡೆಯಿಂದ ಬರುವ ವಾಹನಗಳು ವೆಬ್ಸ್ ಜಂಕ್ಷನ್ ಬಳಿ ಬಲ ತಿರುವು ಪಡೆಯಬೇಕು. ನಂತರ ಮಣಿಪಾಲ್ ಸೆಂಟರ್ ಬಳಿ ಎಡ ತಿರುವು ಪಡೆದು ಕಬ್ಬನ್ ರಸ್ತೆಯಲ್ಲಿ ಮುಂದೆ ಸಾಗಬಹುದು. 

ಹಲಸೂರು ಕಡೆಯಿಂದ ಕಂಟೋನ್ಮೆಂಟ್ ಕಡೆ ತೆರಳುವ ವಾಹನಗಳು, ಟ್ರಿನಿಟಿ ವೃತ್ತದಲ್ಲಿ ಬಲ ತಿರುವು ಪಡೆದು ಹಲಸೂರು ರಸ್ತೆ, ಡಿಕನ್ಸನ್ ರಸ್ತೆ ಮಾರ್ಗವಾಗಿ ಸಂಚರಿಸಿ ಕಬ್ಬನ್ ರಸ್ತೆಯಿಂದ ಮುಂದಕ್ಕೆ ಸಾಗಬಹುದು.