ದೆಹಲಿ ಮೂಲದ ಅಜಾದ್ ಹಾಗೂ ಹರ್ಯಾಣ ಮೂಲದ ಇನ್ನಿಬ್ಬರು ಆರೋಪಿಗಳ ಬಗ್ಗೆ ಮತ್ತಷ್ಟು ಮಾಹಿತಿ ಕಲೆಹಾಕಲಾಗುತ್ತಿದೆ ಹಾಗೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನವದೆಹಲಿ(ಜ.28): ಎರಡು ಸಾವಿರ ಮುಖಬೆಲೆಯ ನಕಲಿ ನೋಟು ಮುದ್ರಿಸುತ್ತಿದ್ದ ಮೂವರು ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಎರಡು ಸಾವಿರ ಮುಖಬೆಲೆಯ ₹18 ಲಕ್ಷ ಮೌಲ್ಯದ ಹಣವನ್ನು ಆರೋಪಿಗಳಾದ ಆಜಾದ್, ಮನೋಜ್ ಮತ್ತು ಸುನಿಲ್ ಬಳಿ ಪತ್ತೆಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ದೆಹಲಿ ಮೂಲದ ಅಜಾದ್ ಹಾಗೂ ಹರ್ಯಾಣ ಮೂಲದ ಇನ್ನಿಬ್ಬರು ಆರೋಪಿಗಳ ಬಗ್ಗೆ ಮತ್ತಷ್ಟು ಮಾಹಿತಿ ಕಲೆಹಾಕಲಾಗುತ್ತಿದೆ ಹಾಗೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.