ಕಲಬುರಗಿ (ಸೆ.17): ಕಲಬುರಗಿಯಲ್ಲಿ ಇಂದು ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಆಚರಿಸಲಾಯಿತು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಪ್ರತಿ ವರ್ಷ ಮೂರು ಸಾವಿರ ಕೋಟಿ ರೂಪಾಯಿ ಖರ್ಚು ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ರೂಪಗೊಂಡಿದ್ದ ನಂಜುಂಡಪ್ಪ ವರದಿ ಅನುಷ್ಠಾನ ಮತ್ತೆ ಐದು ವರ್ಷ ವಿಸ್ತರಣೆ ಮಾಡಲಾಗಿದೆ, ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ನಂಬರ ಒನ್ ಆಗಿದ್ದು, ಸುಮಾರು 67 ಸಾವಿರ ಕೋಟಿ ರೂಪಾಯಿ ಬಂಡವಾಳದ ಪ್ರಸ್ತಾವನೆ ಬಂದಿವೆ. ಹೀಗಾಗಿ ಹೈದ್ರಾಬಾದ್-ಕರ್ನಾಟಕ ಭಾಗದಲ್ಲಿ ಹೆಚ್ಚಿನ ಕೈಗಾರಿಕೆ ಸ್ಥಾಪನೆಗೆ ಕ್ರಮ ಕೈಗೊಳ್ಳುತಿದ್ದೆವೆ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸರ್ದಾರ್ ವಲ್ಲಭಭಾಯ್ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.
ಈ ವೇಳೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ್ ಉಪಸ್ಥಿತರಿದ್ದರು.
