ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರವೆಂದು ಘೋಷಿಸುವಂತೆ ಕೋರಿ ರಾಜ್ಯಸಭೆಯಲ್ಲಿ ಸಲ್ಲಿಸಿರುವ ಖಾಸಗಿ ಮಸೂದೆಯನ್ನು ಸಂಸದ ರಾಜೀವ್ ಚಂದ್ರಶೇಖರ್ ವಾಪಸ್ ತೆಗೆದುಕೊಂಡಿದ್ದಾರೆ.
ನವದೆಹಲಿ (ಮಾ.10): ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರವೆಂದು ಘೋಷಿಸುವಂತೆ ಕೋರಿ ರಾಜ್ಯಸಭೆಯಲ್ಲಿ ಸಲ್ಲಿಸಿರುವ ಖಾಸಗಿ ಮಸೂದೆಯನ್ನು ಸಂಸದ ರಾಜೀವ್ ಚಂದ್ರಶೇಖರ್ ವಾಪಸ್ ತೆಗೆದುಕೊಂಡಿದ್ದಾರೆ.
ಪಾಕಿಸ್ತಾನವನ್ನು ಭಯೋತ್ಪಾದಕ ದೇಶ ಎನ್ನುವುದರ ಬಗ್ಗೆ ಹೆಚ್ಚಿನ ಚರ್ಚೆ ಮಾಡುವ ಅಗತ್ಯವಿಲ್ಲ. ನಮಗೆ ಇದು ಗೊತ್ತಿರುವ ವಿಚಾರ. ನಾವು ಭಯೋತ್ಪಾದನೆಗೆ ಬಲಿಪಶುವಾಗಿರುವಾಗ ಅದರ ವಿರುದ್ಧ ಮೊದಲ ಹೆಜ್ಜೆ ಇಡಲೇಬೇಕು ಎಂದು ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
ಸರ್ಕಾರ ೀ ವಿಚಾರದ ಬಗ್ಗೆ ಗಮನಹರಿಸುವುದಾಗಿ ಭರವಸೆ ನೀಡಿದೆ. ಅದೇ ರೀತಿ ಸಂಸತ್ತಿನಲ್ಲಿ ಗೊತ್ತುವಳಿ ಮಂಡಿಸುವ ಬಗ್ಗೆ ಸಲಹೆಗಳು ಕೂಡಾ ಬಂದಿವೆ. ನಾನು ಸರ್ಕಾರದ ಜೊತೆಗಿದ್ದು ಮುಂದಿನ ಪ್ರಕ್ರಿಯೆ ಬಗ್ಗೆ ಚರ್ಚಿಸುತ್ತೇನೆ ಎಂದು ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
