ಬಿ.ಸಿ.ರೋಡ್ ಪೇಟೆಯಲ್ಲಿ ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರ್‌ಎಸ್‌ಎಸ್ ಕಾರ್ಯಕರ್ತ ಶರತ್ (28) ದೇಹಸ್ಥಿತಿ ಇನ್ನೂ ಗಂಭೀರವಾಗಿದ್ದು, ಗುರುವಾರ ಕೂಡ ಯಾವುದೇ ಚೇತರಿಕೆ ಕಂಡುಬಂದಿಲ್ಲ.

ಬಂಟ್ವಾಳ (ಜು.06): ಬಿ.ಸಿ.ರೋಡ್ ಪೇಟೆಯಲ್ಲಿ ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರ್‌ಎಸ್‌ಎಸ್ ಕಾರ್ಯಕರ್ತ ಶರತ್(28) ದೇಹಸ್ಥಿತಿ ಇನ್ನೂ ಗಂಭೀರವಾಗಿದ್ದು, ಗುರುವಾರ ಕೂಡ ಯಾವುದೇ ಚೇತರಿಕೆ ಕಂಡುಬಂದಿಲ್ಲ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಂಗಳವಾರ ರಾತ್ರಿಯಿಂದ ನಿರಂತರವಾಗಿ ವೈದ್ಯರು ವಿಶೇಷ ನಿಗಾ ಇರಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶರತ್ ಅವರ ಮನೆಯವರು, ಸ್ನೇಹಿತರು ಆತಂಕದಲ್ಲಿದ್ದಾರೆ. ಈ ನಡುವೆ ಶರತ್ ಶೀಘ್ರ ಚೇತರಿಕೆಗೊಂಡು ಪ್ರಾಣಾಪಾಯದಿಂದ ಪಾರಾಗಿ ಗುಣಮುಖರಾಗುವಂತೆ ಸಂಕಲ್ಪ ಮಾಡಿ ಶುಕ್ರವಾರ ಬೆಳಗ್ಗೆ ಶರತ್ ಸ್ನೇಹಿತರು ಶ್ರೀ ಕ್ಷೇತ್ರ ನಂದಾವರದಲ್ಲಿ ಶ್ರೀಮೃತ್ಯುಂಜಯ ಹೋಮ ನಡೆಸಲಿದ್ದಾರೆ.