ಬೈಕ್'ನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ ತಮ್ಮ ಬಳಿ ಇದ್ದ ಚಾಕುವಿನಿಂದ ರುದ್ರೇಶ್ ಕುತ್ತಿಗೆಗೆ ಇರಿದು ಪರಾರಿಯಾಗಿದ್ದಾರೆ.. ತೀವ್ರ ರಕ್ತಸಾವ್ರದಿಂದಾಗಿ ರುದ್ರೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರು(ಅ. 16): ನಗರದ ಕಮರ್ಷಿಯಲ್ ಸ್ಟ್ರೀಟ್ ಬಳಿ ಹಾಡಹಗಲೇ ಆರೆಸ್ಸೆಸ್ ಕಾರ್ಯಕರ್ತರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘೋರ ಘಟನೆ ಭಾನುವಾರ ನಡೆದಿದೆ. ಶಿವಾಜಿನಗರದ ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಕೊಲೆಯಾದ ವ್ಯಕ್ತಿ. ಇಂದು ಕಾಮರಾಜ್ ರಸ್ತೆಯಲ್ಲಿ ನಡೆದ ಆರೆಸ್ಸೆಸ್ ಪಥ ಸಂಚಲನದಲ್ಲಿ ರುದ್ರೇಶ್ ಭಾಗವಹಿಸಿದ್ದರೆನ್ನಲಾಗಿದೆ. ಪಥ ಸಂಚಲನ ಮುಗಿದ ಬಳಿಕ ಕಮರ್ಷಿಲ್ ಸ್ಟ್ರೀಟ್'ನ ರಾಧಾಕೃಷ್ಣ ದೇವಸ್ಥಾನದ ಮಾರ್ಗವಾಗಿ ಮನೆಗೆ ತೆರಳುತ್ತಿದ್ದ ವೇಳೆ ಬೈಕ್'ನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ. ಬಳಿಕ ತಮ್ಮ ಬಳಿ ಇದ್ದ ಚಾಕುವಿನಿಂದ ರುದ್ರೇಶ್ ಕುತ್ತಿಗೆಗೆ ಇರಿದು ಪರಾರಿಯಾಗಿದ್ದಾರೆ.. ತೀವ್ರ ರಕ್ತಸಾವ್ರದಿಂದಾಗಿ ರುದ್ರೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತ ಹರಿಶೇಖರನ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆ ಕೊಲೆ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ರುದ್ರೇಶ್ ಮೃತ ದೇಹ ರವಾನಿಸಲಾಗಿದೆ.