Asianet Suvarna News Asianet Suvarna News

ರುದ್ರೇಶ್ ಹತ್ಯೆಗೆ ಆರೆಸ್ಸೆಸ್ ಕಾರ್ಯಕರ್ತರ ಆಕ್ರೋಶ; ಶಿವಾಜಿನಗರದಲ್ಲಿ ಅಘೋಷಿತ ಬಂದ್

ಪ್ರದೇಶದಲ್ಲಿರುವ ಕೆಲ ಅಂಗಡಿ-ಮುಂಗಟ್ಟುಗಳನ್ನು ಕಾರ್ಯಕರ್ತರು ಮುಚ್ಚಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರೊಂದಿಗೆ ಕಮರ್ಷಿಯಲ್ ಸ್ಟ್ರೀಟ್'ನಲ್ಲಿ ಒಂದು ರೀತಿಯಲ್ಲಿ ಅಘೋಷಿತ ಬಂದ್'ನಂತಹ ವಾತಾವರಣ ನಿರ್ಮಾಣವಾಗಿದೆ.

rss activists stage protest at commercial street in rudresh murder case

ಬೆಂಗಳೂರು(ಅ. 16): ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣ ಶಿವಾಜಿನಗರದಲ್ಲಿ ಪ್ರಕ್ಷುಬ್ಬ ವಾತಾವರಣಕ್ಕೆ ಕಾರಣವಾಗಿದೆ. ನೂರಾರು ಆರೆಸ್ಸೆಸ್ ಕಾರ್ಯಕರ್ತರು ಕೊಲೆ ನಡೆದ ಕಮರ್ಷಿಲ್ ಸ್ಟ್ರೀಟ್ ಬಳಿ ಸೇರಿದ್ದು, ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸುತ್ತಿದ್ದಾರೆ. ಪ್ರದೇಶದಲ್ಲಿರುವ ಕೆಲ ಅಂಗಡಿ-ಮುಂಗಟ್ಟುಗಳನ್ನು ಕಾರ್ಯಕರ್ತರು ಮುಚ್ಚಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರೊಂದಿಗೆ ಕಮರ್ಷಿಯಲ್ ಸ್ಟ್ರೀಟ್'ನಲ್ಲಿ ಒಂದು ರೀತಿಯಲ್ಲಿ ಅಘೋಷಿತ ಬಂದ್'ನಂತಹ ವಾತಾವರಣ ನಿರ್ಮಾಣವಾಗಿದೆ. ಸದ್ಯಕ್ಕೆ ಬಂದ ಮಾಹಿತಿ ಪ್ರಕಾರ ಸುಮಾರು 400ರಷ್ಟು ಆರೆಸ್ಸೆಸ್ ಕಾರ್ಯಕರ್ತರು ಸ್ಥಳದಲ್ಲಿದ್ದು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಸಂಜೆಯ ವೇಳೆ ನಗರದ ವಿವಿಧೆಡೆಯಿಂದ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರು ಶಿವಾಜಿನಗರಕ್ಕೆ ಲಗ್ಗೆ ಹಾಕುವ ನಿರೀಕ್ಷೆ ಇದೆ. ಇದೇ ವೇಳೆ, ಪ್ರತಿಭಟನಾ ಸ್ಥಳಕ್ಕೆ ಮೈಸೂರಿನ ಬಿಜೆಪಿ ಸಂಸದ ಪ್ರತಾಪ್ ಸಿಂಹ ಭೇಟಿಕೊಟ್ಟಿದ್ದಾರೆ.

ರುದ್ರೇಶ್ ಶವದ ಪರೀಕ್ಷೆ ನಡೆಯುತ್ತಿರುವ ವಿಕ್ಟೋರಿಯಾ ಆಸ್ಪತ್ರೆ ಬಳಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಘಿದೆ. ಸಶಸ್ತ್ರ ಸೀಮಾ ಪಡೆಗಳನ್ನು ನಿಯೋಜಿಸಲಾಗಿದೆ. ಡಿಸಿಪಿ, ಎಸಿಪಿ ಹಾಗೂ 6 ಇನ್ಸ್'ಪೆಕ್ಟರ್'ಗಳು ಸ್ಥಳದಲ್ಲಿದ್ದು ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ.

ಇಂದು ಬೆಳಗ್ಗೆ ಆರೆಸ್ಸೆಸ್ ಪಥ ಸಂಚಲನದಲ್ಲಿ ಭಾಗವಹಿಸಿದ್ದ ರುದ್ರೇಶ್ ಅವರು ತಮ್ಮ ಮನೆಗೆ ವಾಪಸ್ ಹೋಗುವ ವೇಳೆ ಕೊಲೆಯಾಗಿದ್ದರು. ಪಲ್ಸರ್ ಬೈಕ್'ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರುದ್ರೇಶ್'ರನ್ನು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದರು.

Latest Videos
Follow Us:
Download App:
  • android
  • ios