ಕೇಂದ್ರ ಬಜೆಟ್‌ನಲ್ಲಿ ಕಾರ್ಮಿಕರಿಗೆ ಯಾವುದೇ ಸೌಲಭ್ಯವಿಲ್ಲದಿರುವುದು ಮತ್ತು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಆರ್‌ಎಸ್‌ಎಸ್‌ ನಂಟು ಹೊಂದಿರುವ ಭಾರತೀಯ ಮಜ್ದೂರ್‌ ಸಂಘ ಫೆ.20ರಂದು ರಾಷ್ಟ್ರಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

ನವದೆಹಲಿ: ಕೇಂದ್ರ ಬಜೆಟ್‌ನಲ್ಲಿ ಕಾರ್ಮಿಕರಿಗೆ ಯಾವುದೇ ಸೌಲಭ್ಯವಿಲ್ಲದಿರುವುದು ಮತ್ತು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಆರ್‌ಎಸ್‌ಎಸ್‌ ನಂಟು ಹೊಂದಿರುವ ಭಾರತೀಯ ಮಜ್ದೂರ್‌ ಸಂಘ ಫೆ.20ರಂದು ರಾಷ್ಟ್ರಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

 ಈ ಬಗ್ಗೆ ಶುಕ್ರವಾರ ಮಾತನಾಡಿದ ಬಿಎಂಎಸ್‌ ಪ್ರಧಾನ ಕಾರ್ಯದರ್ಶಿ ವಿರ್ಜೇಶ್‌ ಉಪಾಧ್ಯಾಯ್‌, ‘ಭಾರತೀಯ ಮಜ್ದೂರ್‌ ಸಂಘ (ಬಿಎಂಎಸ್‌)ದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಯಲ್ಲಿ ಫೆ.20ರಂದು ರಾಷ್ಟ್ರಾದ್ಯಂತ ಕಪ್ಪು ದಿನಾಚರಣೆ ಆಚರಿಸುವಂತೆ ಎಲ್ಲ ಸಂಘಟನೆಗಳಿಗೆ ಸೂಚಿಸಲಾಗಿದೆ. ಅಲ್ಲದೆ, ಅಂದು ಪ್ರತಿಭಟನಾಕಾರರು ಕಪ್ಪು ಬ್ಯಾಡ್ಜ್‌ಗಳನ್ನು ಧರಿಸಲಿದ್ದಾರೆ,’ ಎಂದು ತಿಳಿಸಿದ್ದಾರೆ.