ಮೀಸಲಾತಿ ವ್ಯವಸ್ಥೆಗೆ ಅಂತ್ಯ ಹಾಡಲು ಸಂಘಪರಿವಾರ ಷಡ್ಯಂತ್ರ: ಮಾಯಾವತಿ

ಫಾಗ್ವಾರಾ, ಉತ್ತರ ಪ್ರದೇಶ (ಜ.30): ಆರೆಸ್ಸೆಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಅವುಗಳು ಮೀಸಲಾತಿ ವ್ಯವಸ್ಥೆಗೆ ಅಂತ್ಯ ಹಾಡಲು ಷಡ್ಯಂತ್ರ ನಡೆಸುತ್ತಿವೆ ಎಂದು ಹೇಳಿದ್ದಾರೆ.

ಮುಂದುವರೆದು ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಮಾಯಾವತಿ, ಅದೂ ಕೂಡಾ ಬಿಜೆಪಿಯಂತೆ ಆದಿವಾಸಿ ಹಾಗೂ ದಲಿತರ ಪ್ರಗತಿಗೆ ಹಿನ್ನಡೆಯನ್ನುಂಟುಮಾಡಿದೆ ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಆಡಳಿತಾವಧಿಯಲ್ಲಿ ಉತ್ತರ ಪ್ರದೇಶದಲ್ಲಿ ಭ್ರಷ್ಟಾಚಾರವು ಬಹಳ ಹೆಚ್ಚಾಗಿದೆಯೆಂದು ಅವರು ಹೇಳಿದ್ದಾರೆ.

ಫೆ.11 ರಿಂದ ಏಳು ಹಂತಗಳಲ್ಲಿ ಉತ್ತರ ಪ್ರದೇಶದ ವಿಧಾಸಭೆಗೆ ಚುನಾವಣೆಗಳು ನಡೆಯಲಿವೆ.